Bigboss:
ಬಿಗ್ ಬಾಸ್ ಮನೆಯಂಗಳದಲ್ಲಿ ದಿನದಿಂದ ದಿನಕ್ಕೆ ಪ್ರತಿಯೊಬ್ಬರೂ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿದ್ದಾರೆ ಆಸ್ತಿ ವಿಚಾರದ ಬಳಿಕ ಇದೀಗ ಪ್ರೀತಿ ವಿಚಾರ ಶುರುವಾಗಿದೆ. ಮಾತು ಸಲುಗೆ ಆಪ್ತತೆ ಬೆಳೆದು ಸೋನು ಗೌಡ ಇದೀಗ ಒಂದು ಹೆಜ್ಜೆ ಮುಂದಿಟ್ಟಿದ್ದಾರೆ.
ಸಾಕಷ್ಟು ಕಣ್ಣೀರು ಹಾಕುತ್ತಲೇ ನಿರಂತರ ಮನೆಯ ಸದಸ್ಯರ ಗಮನ ಸೆಳೆಯುತ್ತಿದ್ದ ಸೋನು ಗೌಡ ಇದೀಗ ಹೊಸ ವಿಚಾರದಲ್ಲಿ...
ಬೆಂಗಳೂರು: ಹರ್ ಘರ್ ತಿರಂಗಾ ಆಚರಣೆಯ ಅಂಗವಾಗಿ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 50 ಸಾವಿರ ಮನೆಗಳ ಮೇಲೆ ರಾಷ್ಟ್ರಧ್ವಜಾರೋಹಣ ನಡೆಯಲಿವೆ ಎಂದು ಕ್ಷೇತ್ರದ ಶಾಸಕರೂ ಆದ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.
ಶುಕ್ರವಾರ ತಮ್ಮ ಪ್ರತಿಷ್ಠಾನದ ವತಿಯಿಂದ ಮಲ್ಲೇಶ್ವರಂ ಆಟದ ಮೈದಾನದಲ್ಲಿ ಏರ್ಪಡಿಸಿದ್ದ ಹರ್ ಘರ್ ತಿರಂಗಾ ಆಶಯ ರಚನೆ ಕಾರ್ಯಕ್ರಮದಲ್ಲಿ ಅವರು...
ಬೆಂಗಳೂರು: ಶಿವಮೊಗ್ಗ ಸುಬ್ಬಣ್ಣ ಅವರ ಅಂತ್ಯಕ್ರಿಯೆಯನ್ನು ಸಕಲ ಸರಕಾರಿ ಗೌರವಗಳೊಂದಿಗೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರವೀಂದ್ರ ಕಲಾಕ್ಷೇತ್ರದಲ್ಲಿ ಅವರ ಪಾರ್ಥಿವ ಶರೀರವನ್ನು ಇಟ್ಟು ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದರು.
ಶಿವಮೊಗ್ಗ ಸುಬ್ಬಣ್ಣ ಅವರು ಸಾಹಿತ್ಯ, ಸಂಗೀತ, ಹಾಡುಗಾರಿಕೆ ಯಲ್ಲಿ ಪರಿಣಿತರಾಗಿದ್ದರು. ಹತ್ತು ಹಲವು ಪ್ರಶಸ್ತಿಗಳಿಗೆ...
Banglore:
ಚಾಮರಾಜಪೇಟೆಯ ವಿವಾದಿತ ಮೈದಾನದಲ್ಲಿ ಕಂದಾಯ ಇಲಾಖೆಯೆ ಧ್ವಜಾರೋಹಣ ಮಾಡುವುದಾಗಿ ಸರ್ಕಾರ ನಿರ್ಧರಿಸಿದ ಹಿನ್ನಲೆಯಲ್ಲಿ ಮೈದಾನದಲ್ಲಿ ಭಿಗಿಭದ್ರತೆ ಏರ್ಪಡಿಸಲಾಗಿದೆ. ಭದ್ರತೆಯ ದೃಷ್ಟಿಯಿಂದ ಪೊಲೀಸ್ ಪರೇಡ್ ಮೈದಾನದಲ್ಲಿ ಬೀಡು ಬಿಟ್ಟಿದೆ.
ಸ್ವಾತಂತ್ರ್ಯ ದಿನಾಚರಣೆಯಂದು ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ಪೊಲೀಸ್ ಇಲಾಖೆಯು ಅಗತ್ಯ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಂಡಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಮೈದಾನದ ಸುತ್ತಲೂ...
Jammu and kashmeer:
ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದೆ. ಬಂಡೀಪೊರದಲ್ಲಿ ಬಿಹಾರದ ಯುವಕನೊಬ್ಬ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ.ಭಯೋತ್ಪಾದಕರು ಬಿಹಾರ ಮೂಲದ 19 ವರ್ಷದ ಯುವಕನನ್ನು ಜಮ್ಮು ಮತ್ತು ಕಾಶ್ಮೀರದ ಬಂಡೀಪೊರದಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂಬುವುದಾಗಿ ಶುಕ್ರವಾರ ಪೊಲೀಸರು ಮಾಹಿತಿ ನೀಡಿದ್ದಾರೆ.ಮಧ್ಯರಾತ್ರಿಯ ಸುಮಾರಿಗೆ ಈ ದಾಳಿ ನಡೆದಿದೆ ಎಂಬುವುದಾಗಿ ಹೇಳಲಾಗುತ್ತಿದೆ.
ಗುಂಡಿನ ದಾಳಿಯಲ್ಲಿ ರಕ್ತದ...
ಬೆಂಗಳೂರು: ಭಾರತ ಸರ್ಕಾರದ ರಕ್ಷಣಾ ಮಂತ್ರಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರಿನ ಭಾರತ್ ಎಲೆಕ್ಟ್ರಾನಿಕ್ಸ್ ಸಂಕೀರ್ಣದಲ್ಲಿ ಸ್ವಾತಂತ್ರದ ಅಮೃತಮಹೋತ್ಸವ ಪ್ರಯುಕ್ತ ಎಲ್ಲಾ ಉದ್ಯೋಗಿಗಳಿಗೆ ಹಾಗೂ ಪಾಲುದಾರರಿಗೆ 20,000 ಧ್ವಜಗಳನ್ನು ವಿತರಿಸಲಾಗಿದೆ. ಈ ಮೂಲಕ ಅದ್ಧೂರಿಯಾಗಿ ಸ್ವಾತಂತ್ರೋತ್ಸವ ಆಚರಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ.
ವಿತರಿಸಲಾಗಿರುವಂತ ಧ್ವಜಗಳನ್ನು ಬಿಇಎಲ್ ನ ಎಲ್ಲಾ ಉದ್ಯೋಗಿಗಳು, ಪರಿಯೋಜನ ಅಭಿಯಂತರು ಹಾಗೂ ಪ್ರಶಿಕ್ಷಣಾರ್ಥಿಗಳು ತಮ್ಮ...
chikkaballapura:
ಕಡ್ಡಾಯವಾಗಿ ಎಲ್ಲರೂ ಬೂಸ್ಟರ್ ಡೋಸ್ ಪಡೆದುಕೊಳ್ಳಿ ಎಂಬುವುದಾಗಿ ಸಚಿವ ಡಾ.ಸುಧಾಕರ್ ಇನತೆಗೆ ಕರೆಕೊಟ್ಟಿದ್ದಾರೆ. ರಾಜ್ಯದಲ್ಲಿ ಶೇ.17ರಷ್ಟು ಜನ ಬೂಸ್ಟರ್ ಡೋಸ್ ಪಡೆದಿದ್ದಾರೆ. ಕೆಲವು ವಾರಗಳಲ್ಲಿ ಸಮರೋಪಾದಿಯಲ್ಲಿ ಲಸಿಕೆ ನೀಡುತ್ತೇವೆ. ಎಲ್ಲರಿಗೂ ಉಚಿತವಾಗಿ ಬೂಸ್ಟರ್ ಡೋಸ್ ವ್ಯಾಕ್ಸಿನ್ ನೀಡುತ್ತೇವೆ. ಎಂದು ತಿಳಿಸಿದ್ದಾರೆ ಜೊತೆಗೆ ಮಾಸ್ಕ್ ಕಡ್ಡಾಯದ ಮುನ್ಸೂಚನೆಯನ್ನೂ ಸಚಿವರು ನೀಡಿದ್ದಾರೆ. ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ...
Manthralaya:
ದೇಶದ ವಿವಿದೆಡೆಯಿಂದ ಇಂದು ಮಂತ್ರಾಲಯದತ್ತ ಭಕ್ತರ ದಂಡೇ ಹರಿದು ಬರುತ್ತಿದೆ.ನವೀಕೃತ ಮೊಗಸಾಲೆ ಮತ್ತು ಸಾಲಾಂಕೃತ ಬೃಂದಾವನವನ್ನು ಅಚ್ಚರಿಯಿಂದ ಕಣ್ತುಂಬಿಕೊಳ್ಳುತ್ತಿದ್ದಾರೆ ಭಕ್ತರು.
ಕರ್ನಾಟಕದ ಪ್ರಸಿದ್ದ ಯಾತ್ರಾ ಸ್ಥಳವಾದ ಮಂತ್ರಾಲಯದಲ್ಲಿ ಇಂದು ಶುಭ ಶುಕ್ರವಾರದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನೆ ಸಂಭ್ರಮದಿಂದ ನಡೆಯುತ್ತಿದೆ. ವಿವಿಧೆಡೆಗಳಿಂದ ಅಪಾರ ಭಕ್ತರು ಶ್ರೀಮಠಕ್ಕೆ ಅಗಮಿಸಿದ್ದು, ನವೀಕೃತ ಮೊಗಸಾಲೆ ಮತ್ತು ಸಾಲಂಕೃತ ಬೃಂದಾವನವನ್ನು...
ಬೆಂಗಳೂರು : ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಂಗೀತ ಪರಂಪರೆಯ ಮನೆತನದಿಂದ ಬಂದ ಸುಬ್ಬಣ್ಣ ಅವರು ಸುಗಮ ಸಂಗೀತ ಹಾಗೂ ಚಲನ ಚಿತ್ರ ಹಿನ್ನಲೆ ಗಾಯಕರಾಗಿ ತಮ್ಮದೇ ಛಾಪು ಮೂಡಿಸಿದ್ದರು.
ಅವರ ' ಕಾಡು ಕುದುರೆ ಓಡಿ ಬಂದಿತ್ತಾ ' ಗೀತೆಯು ಇಂದಿಗೂ ಅಭಿಮಾನಿಗಳು...
ಬೆಂಗಳೂರು: ಸುಗಮ ಸಂಗೀತ ಲೋಕದ ಪ್ರಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
'ತಮ್ಮ ವಿಶಿಷ್ಟ ಕಂಠಸಿರಿಯಿಂದ ಕೇಳುಗರ ಮನಗೆದ್ದಿದ್ದ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದ ಸುದ್ದಿ ಕೇಳಿ ತೀವ್ರ ನೋವಾಗಿದೆ.
ನಾಡಿನ ಪ್ರಖ್ಯಾತ ಕವಿಗಳಾದ ಕುವೆಂಪು, ಬೇಂದ್ರೆ ಮತ್ತಿತರರ ಗೀತೆಗಳಿಗೆ ಸ್ವರವಾಗಿದ್ದವರು ಸುಬ್ಬಣ್ಣ. ಅವರ...
ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅತ್ಯಂತ ಮಹತ್ವದ ಹಾಗೂ ಎಚ್ಚರಿಕೆಯ ಸುದ್ದಿಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ 'ಮೇರಾ...