Sunday, September 27, 2026

Karnataka Tv

ಭಾರೀ ಮಳೆಯಿಂದ ರಾಮನಗರ ಜಿಲ್ಲೆಯಲ್ಲಿ 178 ಮನೆಗಳಿಗೆ ಹಾನಿ – ಸಚಿವ ಅಶ್ವತ್ಥನಾರಾಯಣ

ರಾಮನಗರ: ಸತತ ಮಳೆಯಿಂದ ಜಿಲ್ಲೆಯಲ್ಲಿ 178 ಮನೆಗಳಿಗೆ ಹಾನಿಯಾಗಿದ್ದು, ಇದಕ್ಕೆ ಸಂಬಂಧಿಸಿದಂತೆ 1.14 ಕೋಟಿ ರೂಪಾಯಿ ಪರಿಹಾರ ವಿತರಿಸಲಾಗಿದೆ. ಜೊತೆಗೆ ಜಿಲ್ಲೆಯ 70 ಸಂತ್ರಸ್ತರಿಗೆ 15 ಲಕ್ಷ ರೂ. ಒದಗಿಸಲಾಗಿದೆ ಎಂದು ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಸೋಮವಾರವಿಡೀ ಜಿಲ್ಲೆಯ ಹಲವು ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಅವರು, ಬಳಿಕ ಅಧಿಕಾರಿಗಳ...

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿರ್ವಹಣೆ: ವಿವಿಧ ಇಲಾಖೆಗಳ ಜೊತೆ ಸಭೆ ನಡೆಸಿದ BBMP ಮುಖ್ಯ ಆಯುಕ್ತರು

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ಒಳಾಡಳಿತ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾದ ಶ್ರೀ ರಜನೀಶ್ ಗೋಯಲ್ ರವರ ಅಧ್ಯಕ್ಷತೆ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಸಮನ್ವಯ ಸಭೆ ನಡೆಯಿತು. ಸಭೆಯನ್ನು ಉದ್ದೇಶಿಸಿ ಮುಖ್ಯ ಆಯುಕ್ತರಾದ ಶ್ರೀ...

ರಾಜ್ಯ ಸರ್ಕಾರದಿಂದ ಕೇಂದ್ರ ನೀತಿ ಆಯೋಗದ ಮಾದರಿಯಲ್ಲೇ ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆ ರಚಿಸಿ ಆದೇಶ

ಬೆಂಗಳೂರು, ಆಗಸ್ಟ್ 06: ಕೇಂದ್ರ ನೀತಿ ಆಯೋಗದ ಮಾದರಿಯಂತೆ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗವನ್ನು ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆ ಎಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ರಚಿಸಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ. ನವ ಭಾರತಕ್ಕಾಗಿ ನವ ಕರ್ನಾಟಕವನ್ನು ನಿರ್ಮಿಸುವ ಉದ್ದೇಶದಿಂದ ರಚಿಸಲಾಗಿರುವ ಸಂಸ್ಥೆಗೆ ಸರ್ಕಾರದ ಯೋಜನೆ ಹಾಗೂ ಸಂಬಂಧಿಸಿದ ವಿಷಯಗಳಲ್ಲಿ ಪರಿಣಿತರಾದವರನ್ನು...

ಏಷ್ಯಾ ಕಪ್ 2022: ಭಾರತ ತಂಡ ಪ್ರಕಟ

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಯುಎಇಯಲ್ಲಿ ಆಗಸ್ಟ್ 27 ರಿಂದ ಪ್ರಾರಂಭವಾಗುವ ಏಷ್ಯಾ ಕಪ್ 2022 ಗಾಗಿ ಭಾರತದ ತಂಡವನ್ನು ಪ್ರಕಟಿಸಿದೆ. ಮೊದಲ ಆಯ್ಕೆಯ ಆಟಗಾರರು ಎಲ್ಲಾ-ಪ್ರಮುಖ ಪಂದ್ಯಾವಳಿಗೆ ತಂಡಕ್ಕೆ ಮರಳಿದರು. ಆಗಸ್ಟ್ 28 ರಂದು ದುಬೈನಲ್ಲಿ ನಡೆಯಲಿರುವ 'ಎ' ಗುಂಪಿನ ಪಂದ್ಯದಲ್ಲಿ ಭಾರತ-ಪಾಕಿಸ್ತಾನ ಮುಖಾಮುಖಿಯಾಗಲಿವೆ. ಪಂದ್ಯಾವಳಿಯು ಆಗಸ್ಟ್ 27 ರಂದು ಪ್ರಾರಂಭವಾಗಲಿದೆ...

ಏಷ್ಯಾ ಕಪ್ ಟಿ20 ಪಂದ್ಯಾವಳಿ : ಭಾರತದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಹೊರಗೆ

ನವದೆಹಲಿ: ಹಿರಿಯ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬೆನ್ನು ನೋವಿನಿಂದಾಗಿ ಏಷ್ಯಾಕಪ್ ಟಿ 20 ಪಂದ್ಯಾವಳಿಯಿಂದ ಹೊರಗುಳಿಯಲಿದ್ದಾರೆ. ಜಸ್ಪ್ರೀತ್ ಬುಮ್ರಾ ಬೆನ್ನು ನೋವಿನಿಂದ ಬಳಲುತ್ತಿದ್ದು, ಏಷ್ಯಾಕಪ್ನಲ್ಲಿ ಆಡುವುದಿಲ್ಲ. ಅವರು ನಮ್ಮ ಮುಖ್ಯ ಬೌಲರ್ ಮತ್ತು ಅವರು ಟಿ 20 ವಿಶ್ವಕಪ್ ಗೆ ಮೊದಲು ಮತ್ತೆ ಕಾರ್ಯಪ್ರವೃತ್ತರಾಗಬೇಕೆಂದು ನಾವು ಬಯಸುತ್ತೇವೆ. ಏಷ್ಯಾಕಪ್ನಲ್ಲಿ ನಾವು ಅವರನ್ನು ಅಪಾಯಕ್ಕೆ ತಳ್ಳಲು...

ಡಿವೋರ್ಸ್ ಮತ್ತು ಹೊಸ ಲವ್ ಬಗ್ಗೆ ನಟ ನಾಗಚೈತನ್ಯ ಹೇಳಿದ್ದೇನು..?

https://youtu.be/SUwWvakyS0o ಕೆಲ ತಿಂಗಳ ಹಿಂದಷ್ಟೇ ನಟ ನಾಗಚೈತನ್ಯ ಮತ್ತು ನಟಿ ಸಮಂತಾ ಡಿವೋರ್ಸ್ ಪಡೆದು ದೂರವಾಗಿದ್ದಾರೆ. ಅಂದಿನಿಂದ ಇಂದಿನವರೆಗೂ ಸಮಂತಾ ಒಬ್ಬರೇ, ಈ ಬಗ್ಗೆ ಹೇಳಿಕೆ ಕೊಟ್ಟಿದ್ದರು. ನಾಗ ಚೈತನ್ಯ ಇಲ್ಲಿವರೆಗೆ ಈ ಬಗ್ಗೆ ಬಾಯಿ ಬಿಟ್ಟಿರಲಿಲ್ಲ. ಆದ್ರೆ ಸಿನಿಮಾ ಪ್ರಮೋಷನ್‌ ವೇಳೆ ನಡೆದ ಸಂದರ್ಶನವೊಂದರಲ್ಲಿ, ಈ ಬಗ್ಗೆ ಕೇಳಿದಾಗ, ಚೈತನ್ಯ ರಿಪ್ಲೈ ಕೊಟ್ಟಿದ್ದಾರೆ. ಬಾಲಿವುಡ್‌ನಲ್ಲಿ ತಮ್ಮ...

ಹರ್ ಘರ್ ತಿರಂಗ: ರಾಜ್ಯದಲ್ಲಿ 1 ಕೋಟಿ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವ ಗುರಿ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಮನೆ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸುವ ‘ಹರ್ ಘರ್ ತಿರಂಗ’ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಈ ಅಭಿಯಾನದ ಸಿದ್ಧತೆಯನ್ನು ಪರಿಶೀಲಿಸಿ ಮಾತನಾಡಿದರು. ಈ ಕಾರ್ಯಕ್ರಮವನ್ನು ಕೇವಲ ಕಾಟಾಚಾರಕ್ಕೆ ಮಾಡದೆ, ದೇಶದ ಮೇಲಿನ ಅಭಿಮಾನ ಪ್ರೀತಿಯಿಂದ ಆಯೋಜಿಸಬೇಕು. ಇದನ್ನು...

ಆಗಸ್ಟ್ 26ಕ್ಕೆ ತೆರೆಗೆ ಬರ್ತಿದೆ ‘ವಿಕಿಪೀಡಿಯ’..!

ಯಶವಂತ್ ನಟನೆಯ 'ವಿಕಿಪೀಡಿಯ' ಸಿನಿಮಾದ ಟ್ರೇಲರ್ ರಿಲೀಸ್... ಆಗಸ್ಟ್ 26ಕ್ಕೆ ತೆರೆಗೆ ಬರ್ತಿದೆ ಸಿನಿಮಾ..ಸತ್ಯಂ ಶಿವಂ ಸುಂದರಂ, ಒಂದೂರಲ್ಲಿ ರಾಜರಾಣಿ, ಮಹಾದೇವಿ, ಶಾಂತಂಪಾಪಂ, ಯಾರೇ ನೀ‌ ಮೋಹಿನಿ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿರುವ ಯಶವಂತ್ ವಿಕಿಪೀಡಿಯ ಸಿನಿಮಾ ಮೂಲಕ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟಿರುವುದು ಗೊತ್ತೇ ಇದೆ. ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು, ನೋಡುಗರ ಕುತೂಹಲ...

ಸ್ವಾತಂತ್ರ್ಯ ಹೋರಾಟಕ್ಕೆ ಜೆಡಿಎಸ್ ಕೊಡುಗೆ ಏನು? ಎಂದ ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟ ಹೆಚ್ಡಿಕೆ

ಬೆಂಗಳೂರು: ಸ್ವಾತಂತ್ರ್ಯ ಹೋರಾಟಕ್ಕೆ ಜೆಡಿಎಸ್ ಪಕ್ಷದ ಕೊಡುಗೆ ಏನು? ಎಂದು ಕೇಳಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿಗಳು, ಸ್ವಯಂಘೋಷಿತ ಸಂವಿಧಾನ ರಕ್ಷಕ ಸಿದ್ದರಾಮಯ್ಯ ಮತ್ತೆ ಜೆಡಿಎಸ್ ಬಗ್ಗೆ ವಿಷ ಕಾರಿಕೊಂಡಿದ್ದಾರೆ. ಜೆಡಿಎಸ್ ಪಕ್ಷ ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆ...

ಕೊಂಕಣಿ ಬ್ರಾಹ್ಮಿನ್ಸ್ ಸ್ಟೈಲ್ ಬದನೆ ಸುಕ್ಕೆ.. ಚಪಾತಿಗೆ ಬೆಸ್ಟ್ ಕಾಂಬಿನೇಷನ್..

https://youtu.be/egpjSBQP8Xg ನೀವು ಮನೆಯಲ್ಲಿ ಚಪಾತಿ, ರೊಟ್ಟಿ ತಯಾರಿಸಿದಾಗ, ಅದರ ಜೊತೆ ಯಾವ ಗ್ರೇವಿ ತಯಾರಿಸಬೇಕು ಅಂತಾ ಕನ್ಫ್ಯೂಷನ್‌ನಲ್ಲಿ ಇದ್ರೆ, ಒಮ್ಮೆ ಬದನೆ ಗ್ರೇವಿ ಟ್ರೈ ಮಾಡಿ ನೋಡಿ. ಹಾಗಾದ್ರೆ ಬದನೆ ಗ್ರೇವಿ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ನಾಲ್ಕು ಬದನೆಕಾಯಿ, ಎರಡು ಈರುಳ್ಳಿ, ಕೊಂಚ ಸಣ್ಣಗೆ ಹೆಚ್ಚಿದ ಕೊತ್ತೊಂಬರಿ ಸೊಪ್ಪು, ಒಂದು ಸ್ಪೂನ್...

About Me

32533 POSTS
0 COMMENTS
- Advertisement -spot_img

Latest News

ರೈತರ ಧರಣಿ ಸ್ಥಳಕ್ಕೆ ಧಾವಿಸಿ, ರೈತರಿಗೆ ಧೈರ್ಯ ಹೇಳಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ಭೈರಮಂಗಲದಲ್ಲಿ ಬಿಡದಿ ಉಪನಗರ ಯೋಜನೆ ವಿರೋಧಿಸಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರೈತರು ಹಾಗೂ ರೈತ ಮಹಿಳೆಯರ ಮೇಲೆ ಪೊಲೀಸರು ನಿರ್ದಯವಾಗಿ ದಬ್ಬಾಳಿಕೆ ನಡೆಸಿ...
- Advertisement -spot_img