ಕಲಬುರ್ಗಿ: ಸಿದ್ದು ಕುಡಿದಾಗ ಒಂದು ಮಾತನಾಡುತ್ತಾರೆ, ಕುಡಿಯದೆ ಇದ್ದಾಗ ಇನ್ನೊಂದು ಮಾತನಾಡುತ್ತಾರೆ ಎಂದು ಕೆ ಎಸ್ ಈಶ್ವರಪ್ಪ ಸಿದ್ದುಗೆ ಟಾಂಗ್ ನೀಡಿದ್ದಾರೆ. ಸಿದ್ದರಾಮಯ್ಯ ಬಿಜೆಪಿಯ ರಾಜ್ಯಾಧ್ಯಕ್ಷ ನವೀನ್ ಕುಮಾರ್ ಕಟೀಲ್ ಭಯೋತ್ಪಾದಕ ಎಂದು ಹೇಳಿರುವ ಹೇಳಿಕೆಗೆ ಕಲಬುರ್ಗಿಯಲ್ಲಿ ಕೆ ಎಸ್ ಈಶ್ವರಪ್ಪ ಸಿದ್ದರಾಮಯ್ಯ ಯಾವಾಗ ಕುಡಿಯುತ್ತಾರೆ, ಯಾವಾಗ ಕುಡಿಯುವುದಿಲ್ಲ ಎಂದು ತಿಳಿಯುವುದೇ ಇಲ್ಲ. ಕುಡಿದಾಗ...
ಬೆಂಗಳೂರು: ಬೆಂಗಳೂರಿನಲ್ಲಿ ಪಿಸ್ತೂಲ್ ತೋರಿಸಿ ಸಿನಿಮೀಯ ರೀತಿಯಲ್ಲಿ ದರೋಡೆ ಮಾಡಲಾಗಿದೆ. ವೈದ್ಯಕೀಯ ಸಿಬ್ಬಂದಿಯ ಸೋಗಿನಲ್ಲಿ ಬಂದಿದ್ದವರಿಂದ ಕೃತ್ಯ ನಡೆದಿದೆ.
ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯ ಎಸ್ಬಿಎಂ ಕಾಲೋನಿಯಲ್ಲಿ ಘಟನೆ ನಡೆದಿದೆ.
ಸಂಪತ್ ಸಿಂಗ್ ಎಂಬವರ ಮನೆಗೆ ನುಗ್ಗಿದ ಮೂವರು ಕೃತ್ಯವೆಸಗಿದ್ದಾರೆ. ವ್ಯಾಕ್ಸಿನ್ ಹಾಕುವುದಾಗಿ ಮನೆಯೊಳಗಡೆ ಬಂದು ದರೋಡೆ ನಡೆಸಿದ್ದಾರೆ. ಪಿಸ್ತೂಲ್ ತೋರಿಸಿ 150 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ....
ಕಾನ್ಪುರ: ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದೆ. ಅಕ್ಷರ್ ಪಟೇಲ್ ಮಾರಕ ಬೌಲಿಂಗ್ ದಾಳಿಗೆ ನ್ಯೂಜಿಲ್ಯಾಂಡ್ ಬ್ಯಾಟರ್ ಗಳು ತತ್ತರಿಸಿದ್ದರು. ಆದರೆ ಒಂದು ವಿಕೆಟ್ ನಿಂದ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದೆ.
ಕಾನ್ಪುರದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ ನಲ್ಲಿ 345 ರನ್ ಗಳಿಗೆ...
ಹಾವೇರಿ: ಬೆಂಬಲ ಬೆಲೆಯಡಿ ಜಿಲ್ಲೆಯ ಹಾನಗಲ್, ಶಿಗ್ಗಾಂವ, ಹಿರೇಕೆರೂರು ಹಾಗೂ ರಾಣೇಬೆನ್ನೂರ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಭತ್ತ ಖರೀದಿ ಕೇಂದ್ರ ಆರಂಭಿಸಲಿದ್ದು, ಡಿಸೆಂಬರ 1 ರಿಂದ ನೋಂದಣಿ ಆರಂಭವಾಗಲಿದ್ದು, ರೈತರು ಇದರ ಸದುಪಯೋಗ ಪಡಿಸಿಕೊಳ್ಳಲು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ತಿಳಿಸಿದ್ದಾರೆ.
ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕನಿಷ್ಟ ಬೆಂಬಲ ಬೆಲೆಯಡಿ ಭತ್ತ ಖರೀದಿ ಕೇಂದ್ರ...
ನವದೆಹಲಿ: ಮಸೂದೆಯ ಬಗ್ಗೆ ಚರ್ಚೆ ನಡೆಸಬೇಕೆಂದು ಪಕ್ಷಗಳು ಒತ್ತಾಯಿಸಿದ್ದರಿಂದ ಸಂಸತ್ತಿನಲ್ಲಿ ಭಾರಿ ಗದ್ದಲದ ನಡುವೆ ಕೃಷಿ ಕಾನೂನುಗಳ ರದ್ದತಿ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.
ಆದಾಗ್ಯೂ, ಮಸೂದೆಯನ್ನು ಸಂಸತ್ತಿನ ಕೆಳಮನೆಯಲ್ಲಿ ಯಾವುದೇ ಚರ್ಚೆಯಿಲ್ಲದೆ ಅಂಗೀಕರಿಸಲಾಯಿತು.
ಪ್ರಧಾನಿ ನರೇಂದ್ರ ಮೋದಿಯವರು ಗುರುನಾನಕ್ ಜಯಂತಿಯಂದು ರೈತರು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವಂತ ಮೂರು ಕೃಷಿ ಮಸೂದೆಗಳನ್ನು ವಾಪಾಸ್ ಪಡೆಯುತ್ತಿರೋದಾಗಿ ಘೋಷಿಸಿದ್ದರು. ಈ ಬಳಿಕ...
ಬೆಂಗಳೂರು : ಬೆಂಗಳೂರಿನ ರಸ್ತೆಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಫೆರಿಫೆರಲ್ ರಿಂಗ್ ರೋಡ್ ರಚನೆ ಮಾಡಲು ಭೂಮಿ ಸ್ವಾಧೀನಪಡಿಸಿಕೊಳ್ಳಿ ಹಾಗೂ ಕಾರ್ಯಯೋಜನೆಯನ್ನು ಅನುಷ್ಠಾನಕ್ಕೆ ತರುವಂತೆ ರಾಜ್ಯ ಸರ್ಕಾರ ಹಾಗೂ ಬಿಡಿಎಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ...
ತಿರುಪತಿ:ತಿರುಮಲ ತಿರುಪತಿ ದೇವಸ್ಥಾನದ ಹಿರಿಯ ಅರ್ಚಕರಾಗಿ ಮತ್ತು ವಿಶೇಷ ಕರ್ತವ್ಯದ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾಲರ್ ಶೇಷಾದ್ರಿ ಎಂದೇ ಖ್ಯಾತರಾಗಿದ್ದ ಪಾಲ ಶೇಷಾದ್ರಿ ಅವರು ಸೋಮವಾರ ಬೆಳಗ್ಗೆ ಹೃದಯಾಘಾತದಿಂದ (74) ನಿಧನರಾದರು.
ಡಾಲರ್ ಶೇಷಾದ್ರಿ ಅವರು ಭಾನುವಾರ ರಾತ್ರಿ ವಿಶಾಖಪಟ್ಟಣದಲ್ಲಿ ಕಾರ್ತಿಕ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅವರು ಟಿಟಿಡಿ ಕಲ್ಯಾಣಮಂಟಪದಲ್ಲಿ ವೆಂಕಟೇಶ್ವರ ದೇವರ ಪವಲಿಂಪು...
ಹಾಸನ: ರಾಜ್ಯದ ಮತ್ತೊಂದು ಶಾಲೆಯಲ್ಲಿ ಕೊರೋನಾ ಸ್ಫೋಟವಾಗಿದೆ. ಹಾಸನದ ವಸತಿ ಶಾಲೆಯಲ್ಲಿ 13 ಮಕ್ಕಳಿಗೆ ಪಾಸಿಟಿವ್ ಬಂದಿದೆ.
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ ವಸತಿ ಶಾಲೆಯಲ್ಲಿ ಕೊರೋನಾ ಸ್ಫೋಟವಾಗಿದೆ. ಆರೋಗ್ಯ ಇಲಾಖೆಯಿಂದ ಶಾಲೆಯ 200 ಮಕ್ಕಳಿಗೆ ಟೆಸ್ಟ್ ಮಾಡಿಸಿದ್ದು, ಈಗಾಗ್ಲೇ 13 ವಿದ್ಯಾರ್ಥಿಗಳಲ್ಲಿ ಕೊರೋನಾ ಪಾಸಿಟಿವ್ ಬಂದಿದೆ. ವಿದ್ಯಾರ್ಥಿಗಳು, ಪೋಷಕರು ಭಾರೀ ಆತಂಕದಲ್ಲಿದ್ದಾರೆ. ಇನ್ನು ಈ ಬಗ್ಗೆ...
ಬೆಂಗಳೂರು: ರಾಜಾಜಿನಗರದ ಇಎಸ್ಐ ಆಸ್ಪತ್ರೆಯಲ್ಲಿ ಕರೊನಾ ಸೋಂಕಿಗೆ ಬಲಿಯಾಗಿದ್ದ ವಿಧವೆ ಸಹಿತ ಇಬ್ಬರ ಮೃತದೇಹಗಳು ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ 15 ತಿಂಗಳ ಕಾಲ ಅಂತ್ಯಸಂಸ್ಕಾರವನ್ನೂ ಕಾಣದೆ ಶವಾಗಾರದ ಶೈತ್ಯಪೆಟ್ಟಿಗೆಯಲ್ಲಿ ಕೊಳೆಯುತ್ತಿದ್ದ ಪ್ರಕರಣ ಶನಿವಾರ ಬೆಳಕಿಗೆ ಬಂದಿದೆ.
ಇದು ಇಎಸ್ಐ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯ ಎಂಬುದು ಮೇಲ್ನೋಟಕ್ಕೆ ಸಾಬೀತಾಗಿದೆ. 2019ರ ಡಿಸೆಂಬರ್ನಲ್ಲಿ ಕರೊನಾ ಕಾಣಿಸಿಕೊಂಡು, 2020ರ ಮಾರ್ಚ್ನಲ್ಲಿ ಭಾರತದಲ್ಲಿ...
ಬೆಂಗಳೂರು: ಐತಿಹಾಸಿಕ ಕಡಲೆಕಾಯಿ ಪರಿಷೆ ನವೆಂಬರ್ 29 ರಿಂದ ಡಿಸೆಂಬರ್ 1ರವರೆಗೆ ನಡೆಯಲಿದ್ದು, ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಕಾರ್ತಿಕ ಮಾಸದ ಕೊನೆ ಸೋಮವಾರದಂದು ನಡೆಯುವ ಕಡಲೆಕಾಯಿ ಪರಿಷೆ ಈ ಬಾರಿ ಮೂರು ದಿನಗಳ ಕಾಲ ನಡೆಯಲಿದೆ.ಹೀಗಾಗಿ ಬಸವನಗುಡಿ ಸುತ್ತಾಮುತ್ತಾ ಜಾತ್ರೆಯ ವಾತಾವರಣ ನಿರ್ಮಾಣವಾಗಿದೆ. ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಇಂದು ಸಾವಿರಾರು ಸಂಖ್ಯೆಯಲ್ಲಿ...