Monday, October 12, 2026

Karnataka Tv

ಹುಬ್ಬಳ್ಳಿ ಪ್ರಕರಣವನ್ನು ಸಾಮಾನ್ಯ ಎಂದು ಪರಿಗಣಿಸಿಲ್ಲ: ಗಲಭೆಕೋರರ ವಿರುದ್ಧ ಕಠಿಣ ಕ್ರಮ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ :  ಹುಬ್ಬಳ್ಳಿ ಪ್ರಕರಣವನ್ನು ಸಾಮಾನ್ಯ ಗಲಭೆ ಎಂದು ಪರಿಗಣಿಸಿಲ್ಲ. ಷಡ್ಯಂತ್ರ ಮಾಡಿ ಪೊಲೀಸ್ ಠಾಣೆಯ ಮೇಲೆ ವ್ಯವಸ್ಥಿತವಾಗಿ ದಾಳಿ ಮಾಡಿರುವುದನ್ನು ಬಹಳ ಗಂಭೀರವಾಗಿ ಪರಿಗಣಿಸಲಾಗಿದೆ. ಕೆಲವೇ ದಿನಗಳಲ್ಲಿ ಇದರ ಹಿಂದಿರುವ ಸಂಘಟನೆ, ವ್ಯಕ್ತಿಗಳನ್ನು ಪತ್ತೆ ಹಚ್ಚಿ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ...

ವರನಟ ಡಾ.ರಾಜ್ ಕುಮಾರ್ 94ನೇ ಹುಟ್ಟುಹಬ್ಬ: ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಕೇಕ್ ಕತ್ತರಿಸಿ ಆಚರಣೆ

ಬೆಂಗಳೂರು: ಕನ್ನಡದ ವರನಟ ದಿ. ರಾಜಕುಮಾರ್ ಅವರ 94ನೇ ಹುಟ್ಟುಹಬ್ಬದ ಪ್ರಯುಕ್ತ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗೋಕಾಕ್ ಚಳವಳಿ ವೃತ್ತ (18ನೇ ಕ್ರಾಸ್) ಮತ್ತು ಸುಬ್ರಹ್ಮಣ್ಯ ನಗರದ ಸಂಗೊಳ್ಳಿ ರಾಯಣ್ಣ ಉದ್ಯಾನದಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮಗಳಲ್ಲಿ ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಪಾಲ್ಗೊಂಡಿದ್ದರು. ಎರಡೂ ಕಡೆಗಳಲ್ಲಿ ರಾಜಕುಮಾರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ...

ಡಾ.ರಾಜ್‍ಕುಮಾರ್ ಶ್ರೇಷ್ಠ ಕಲಾವಿದರು – ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್

ಬೆಂಗಳೂರು: ಇಂದು ಮಹಾನ್ ನಟರಾದ ಡಾ. ರಾಜ್‍ಕುಮಾರ್ ಅವರ ಜನ್ಮದಿನ. ಕನ್ನಡ ನಾಡಿನ ಸಂಸ್ಕೃತಿ, ಭಾಷೆ ಮತ್ತು ಪರಂಪರೆಗಳನ್ನು ಉಳಿಸಿದ ಒಬ್ಬ ಶ್ರೇಷ್ಠ ಕಲಾವಿದರಾಗಿ ಡಾ. ರಾಜ್‍ಕುಮಾರ್ ಅವರು ಕೆಲಸ ಮಾಡಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು. ಕಂಠೀರವ ಸ್ಟುಡಿಯೋದ ಡಾ.ರಾಜ್‍ಕುಮಾರ್ ಅವರ ಸ್ಮಾರಕಕ್ಕೆ ಭೇಟಿ ನೀಡಿ...

ಮಠಗಳು ಮೌಲ್ಯಗಳನ್ನು ಪುನರ್ ಸ್ಥಾಪಿಸಿದರೆ ಮಾತ್ರ ಸಮಾಜದಲ್ಲಿ ಮಾನವ ಸಂಬಂಧಗಳು ಬೆಳೆಯುತ್ತವೆ – ಸಿಎಂ ಬಸವರಾಜ ಬೊಮ್ಮಾಯಿ

ದಾವಣಗೆರೆ : ಅಂತ:ಕರಣದಿಂದ ಮಾನವ ಸಂಬಂಧಗಳ ಪುನರ್ ಸ್ಥಾಪನೆ ಸಾಧ್ಯ. ಮಠಗಳು ಮೌಲ್ಯಗಳನ್ನು ಪುನರ್ ಸ್ಥಾಪಿಸಿದರೆ ಮಾತ್ರ ಸಮಾಜದಲ್ಲಿ ಮಾನವ ಸಂಬಂಧಗಳು ಬೆಳೆಯುತ್ತವೆ.ಇದೆ ನಮ್ಮ ಅಂತರ್ಗತ, ಗುಣಧರ್ಮ ಮತ್ತು ಶಕ್ತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಪಂಚಮಸಾಲಿ ಜಗದ್ಗುರು ಪೀಠ, ಹರಕ್ಷೇತ್ರ, ಹರಿಹರ ಇವರ ವತಿಯಿಂದ ಪಂಚಮಸಾಲಿ ಗುರುಪೀಠದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯದ...

86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಸೆ.23ರಿಂದ 25ರವರೆಗೆ ಹಾವೇರಿಯಲ್ಲಿ ಆಯೋಜನೆ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಹಾವೇರಿಯಲ್ಲಿ ಸೆಪ್ಟೆಂಬರ್ 23, 24 ಹಾಗೂ 25 ರಂದು ಮೂರು ದಿನಗಳ ಕಾಲ 86 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲು ತೀರ್ಮಾನಿಸಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಅರ್ಥಪೂರ್ಣ ಗೋಷ್ಠಿ ಆಯೋಜಿಸಿ ಗೋಷ್ಠಿಗಳಲ್ಲಿ ಹೆಚ್ಚಿನ ಜನ ಭಾಗವಹಿಸುವಂತಾಗಬೇಕು...

ರಾಜ್ಯದಲ್ಲಿ ಇಂದು 139 ಮಂದಿಗೆ ಕೋವಿಡ್, ಬೆಂಗಳೂರಿನಲ್ಲಿ 100ರ ಗಡಿದಾಟಿದ ಕೇಸ್

ಬೆಂಗಳೂರು: ಕಳೆದ 24 ಗಂಟೆಯಲ್ಲಿ ಕರ್ನಾಟಕದಲ್ಲಿ ಹೊಸದಾಗಿ 139 ಮಂದಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಹೊಸದಾಗಿ ಬೆಂಗಳೂರು ನಗರದಲ್ಲಿ 132, ಬೆಂಗಳೂರು ಗ್ರಾಮಾತಂರ, ಚಿಕ್ಕಮಗಳೂರು, ದಾವಣಗೆರೆ, ಕೋಲಾರ ಮತ್ತು ರಾಮನಗರ ಜಿಲ್ಲೆಯಲ್ಲಿ ತಲಾ ಒಂದು ಕೇಸ್ ಪತ್ತೆಯಾಗಿದೆ ಎಂದು...

3 ತಿಂಗಳಲ್ಲಿ ಏಳು ನೂತನ ವಿ.ವಿ.ಗಳ ಕಾರ್ಯಾರಂಭ – ಸಚಿವ ಡಾ.ಅಶ್ವತ್ಥನಾರಾಯಣ

ಹರಿಹರ: ಈ ವರ್ಷದ ಬಜೆಟ್ಟಿನಲ್ಲಿ ಘೋಷಿಸಿರುವ 7 ನೂತನ ವಿಶ್ವವಿದ್ಯಾಲಯಗಳನ್ನು ಇನ್ನು 3 ತಿಂಗಳಲ್ಲಿ ಸ್ಥಾಪಿಸಲಾಗುವುದು ಮತ್ತು 7 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳನ್ನು ಐಐಟಿ ಮಾದರಿಯಲ್ಲಿ ಉನ್ನತೀಕರಣವನ್ನು ಸಹ ಶೀಘ್ರವೇ ಕೈಗೆತ್ತಿಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಇಲ್ಲಿನ ಪಂಚಮಚಾಲಿ ಪೀಠದಲ್ಲಿ ಶನಿವಾರ ಏರ್ಪಡಿಸಿದ್ದ ಸ್ವಾತಂತ್ರ್ಯದ ಅಮೃತ ಮಹೋತ್ಸವ...

ಪಿಎಸ್ಐ ನೇಮಕಾತಿ ಅಕ್ರಮದ ಕಿಂಗ್ ಪಿನ್ ಮಹಾಂತೇಶ್ ಗೆ 7 ದಿನ ಸಿಐಡಿ ಕಸ್ಟಡಿ

ಕಲಬುರ್ಗಿ: 545 ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ಸಿಐಡಿ ಪೊಲೀಸರು ಬಂಧಿಸಿದ್ದಂತ ಕಾಂಗ್ರೆಸ್ ಮುಖಂಡ ಮಹಾಂತೇಶ್ ಪಾಟೀಲ್ ಗೆ ಕೋರ್ಟ್ 7 ದಿನ ಸಿಐಡಿ ವಶಕ್ಕೆ ನೀಡಿ ಆದೇಶಿಸಿದೆ. ನಿನ್ನೆ ಪ್ರಕರಣ ಸಂಬಂಧ ಸಿಐಡಿ ಪೊಲೀಸರು ಕಾಂಗ್ರೆಸ್ ಮುಖಂಡ ಮಹಾಂತೇಶ್ ಪಾಟೀಲ್ ನನ್ನು ಬಂಧಿಸಿದ್ದರು. ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ...

ರಾಜ್ಯದ ಸಹಕಾರಿ ಕ್ಷೇತ್ರದಲ್ಲೂ ಹಣಕ್ಕಾಗಿ ಉದ್ಯೋಗಗಳ ಮಾರಾಟ – ಮಾಜಿ ಸಿಎಂ ಕುಮಾರಸ್ವಾಮಿ ಗಂಭೀರ ಆರೋಪ

ಬೀದರ್: ರಾಜ್ಯದ ಬಡ ಮಕ್ಕಳಿಗೆ ಪಾರದರ್ಶಕವಾಗಿ ಉದ್ಯೋಗ ಕೊಡುವ ಜವಾಬ್ದಾರಿಯನ್ನು ರಾಜ್ಯ ಸರಕಾರವು ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ನೇರ ಆರೋಪ ಮಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; “ಪಿಎಸ್ʼಐ ನೇಮಕಾತಿ ಅಷ್ಟೇ ಅಲ್ಲ ಸಹಕಾರಿ ಕ್ಷೇತ್ರದಲ್ಲಿಯೂ ಸರಕಾರಿ ಉದ್ಯೋಗಗಳನ್ನು ಹಣಕ್ಕೆ ಮಾರಿಕೊಳ್ಳುತ್ತಿದ್ದಾರೆ” ಎಂದು ಹೇಳಿದರು. ಬೀದರ್ʼನಲ್ಲಿಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ಜಿಲ್ಲಾ ಹಾಲು ಒಕ್ಕೂಟಗಳಲ್ಲಿ...

“ಕಂಡ್ಹಿಡಿ ನೋಡನ”ಅಂತಿದ್ದಾರೆ ನಿರ್ದೇಶಕ ನಾಗೇಂದ್ರ ಅರಸ್..!

"ಕಂಡ್ಹಿಡಿ ನೋಡನ"ಅಂತಿದ್ದಾರೆ ನಾಗೇಂದ್ರ ಅರಸ್..! "ಸೈಕೋ ಶಂಕರ" ಮ‌ೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸಿದ ಪ್ರಣವ ಸೂರ್ಯ ನಾಯಕರಾಗಿ ನಟಿಸಿರುವ, ನಾಗೇಂದ್ರ ಅರಸ್ ನಿರ್ದೇಶನದ "ಕಂಡ್ಹಿಡಿ ನೋಡನ" ಚಿತ್ರದ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಚಿತ್ರತಂಡ ಮಾಧ್ಯಮದ ಮುಂದೆ ಚಿತ್ರದ ಕುರಿತು ಮಾತನಾಡಿತ್ತು. ನಾನು ಪ್ರಣವ್ ಸೂರ್ಯ ಅವರ ಮ್ಯಾನ್ ಲಿಯೋ ಸ್ಟುಡಿಯೋದಲ್ಲಿ ಹೀಗೆ ಮಾತನಾಡುತ್ತಿರುವಾಗ ಆರಂಭವಾದ ಚಿತ್ರವಿದು. ಸಸ್ಪೆನ್ಸ್...

About Me

32611 POSTS
0 COMMENTS
- Advertisement -spot_img

Latest News

Hubli News: ಕಬ್ಬು ಬೆಳೆಗಾರರ ಹೋರಾಟ ಈಗ ದೆಹಲಿಯ ಅಂಗಳಕ್ಕೆ..!

Hubli News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದ್ದು, ಬೆಳಗಾವಿಯಿಂದ 35 ರೈತರ ನಿಯೋಗ ದೆಹಲಿಗೆ ಪ್ರಯಾಣ ಬೆಳೆಸಿದೆ..! ಬೆಳಗಾವಿಯ ಸಾಂಬ್ರಾ...
- Advertisement -spot_img