Friday, February 7, 2025

Latest Posts

ಈ ಬಗ್ಗೆ ಅಧಿಕಾರಿಗಳು ಗಮನ ಕೊಟ್ಟು ಅಮೂಲ್ಯ ಜೀವಗಳ ಹರಣ ತಪ್ಪಿಸಬೇಕು: ಅಪಘಾತದ ಬಗ್ಗೆ ಹೆಚ್ಡಿಕೆ ಬೇಸರ

- Advertisement -

Political News: ಉತ್ತರಕನ್ನಡದ ಯಲ್ಲಾಪುರದಲ್ಲಿ ಮತ್ತು ರಾಯಚೂರಿನ ಸಿಂಧನೂರಿನಲ್ಲಿ ನಡೆದ ಅಪಘಾತದ ಬಗ್ಗೆ ಟ್ವೀೀಟ್ ಮಾಡಿರುವ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಸಂಭವಿಸಿರುವ ಎರಡು ಭೀಕರ ಅಪಘಾತಗಳಲ್ಲಿ 14 ಜನ ಸಾವನ್ನಪ್ಪಿರುವ ವಾರ್ತೆ ಕೇಳಿ ನನಗೆ ತೀವ್ರ ಆಘಾತ ಉಂಟಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿಯ ಅರೆಬೈಲ್ ಬಳಿ ಸಂಭವಿಸಿದ ಅಪಘಾತದಲ್ಲಿ 10 ಜನರು ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರು ಬಳಿ ರಸ್ತೆ ದುರಂತದಲ್ಲಿ ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರು ದುರ್ಮರಣಕ್ಕೆ ತುತ್ತಾಗಿರುವುದು ನನಗೆ ಅತೀವ ನೋವುಂಟು ಮಾಡಿದೆ ಎಂದು ಬರೆದುಕೊಂಡಿದ್ದಾರೆ.

ಮೃತರ ಆತ್ಮಗಳಿಗೆ ಚಿರಶಾಂತಿ ಸಿಗಲಿ, ದುಃಖತಪ್ತ ಕುಟುಂಬಗಳಿಗೆ ತಮ್ಮವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಅಸಮರ್ಪಕ ರಸ್ತೆ ಮೂಲಸೌಕರ್ಯ, ವಾಹನಗಳ ಆತುರದ ಚಾಲನೆ, ನಿದ್ದೆಗಣ್ಣಿನಲ್ಲಿ ವಾಹನ ಚಾಲನೆ, ಸಂಚಾರ ನಿಯಮಗಳ ಉಲ್ಲಂಘನೆ ಇತ್ಯಾದಿ ಕಾರಣಗಳು ಅಪಘಾತಗಳಿಗೆ ಕಾರಣವಾಗುತ್ತಿವೆ. ಈ ಬಗ್ಗೆ ಅಧಿಕಾರಿಗಳು ಹೆಚ್ಚು ಗಮನ ಕೊಟ್ಟು ಅಮೂಲ್ಯ ಜೀವಗಳ ಹರಣ ತಪ್ಪಿಸಬೇಕು ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ..

- Advertisement -

Latest Posts

Don't Miss