Monday, July 22, 2024

Latest Posts

ಡೆಂಗ್ಯೂ ನಿಯಂತ್ರಣಕ್ಕೆ ಅಧಿಕಾರಿಗಳು ಮುಂಜಾಗ್ರತೆವಹಿಸಬೇಕು: D.H.O ಡಾ.ಶಶಿ.ಪಾಟೀಲ ಎಚ್ಚರಿಕೆ

- Advertisement -

Dharwad News: ಧಾರವಾಡ ಜಿಲ್ಲೆಯಲ್ಲಿ ಡೆಂಗ್ಯೂ, ಚಿಕನ್ ಗುನ್ಯಾ ಅಂತಹ ಕೀಟಜನ್ಯ ರೋಗಗಳು ಹೆಚ್ಚಳವಾಗದಂತೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ವ್ಯಾಪಕವಾಗಿ ಸಾರ್ವಜನಿಕ ತಿಳುವಳಿಕೆ ಹಾಗೂ ಸಮೀಕ್ಷಾ ಕಾರ್ಯಗಳನ್ನು ಅಭಿಯಾನ ಮಾದರಿಯಲ್ಲಿ ಹಮ್ಮಿಕೊಳ್ಳಬೇಕು.

ಮುಂದಿನ 15 ದಿನಗಳಲ್ಲಿ ಡೆಂಗ್ಯೂ ಶಂಕಿತ ಪ್ರಕರಣಗಳು ಕಡಿಮೆ ಆಗಿ, ಜ್ವರಪೀಡಿತರ ಸಂಖ್ಯೆ ಇಳಿಮುಖವಾಗದಿದ್ದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಪಬ್ಲಿಕ್ ನೆಗ್ಲಿಜೆನಸಿ ಆ್ಯಕ್ಟ್ ಕೆಳಗೆ ಕ್ರಿಮಿನಲ್ ಕೆಸ್ ದಾಖಲಿಸುವುದಾಗಿ. D.H.O ಡಾ.ಶಶಿ ಪಾಟೀಲ ಎಚ್ಚರಿಕೆ ನೀಡಿದ್ದಾರೆ

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡೆಂಗ್ಯೂ ಶಂಕಿತ ಪ್ರಕರಣಗಳ ಪರಿಶೀಲನೆ ಹಾಗೂ ಆರೋಗ್ಯ, ಕಂದಾಯ, ಪಂಚಾಯತ ರಾಜ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರ ಸಭೆ ಜರುಗಿಸಿ, ಮಾತನಾಡಿದರು.

ಸಕಾಲಕ್ಕೆ ಸಾರ್ವಜನಿಕರಿಗೆ ಸ್ಪಂಧಿಸದೆ, ಅಧಿಕಾರಿಗಳ ನಿರ್ಲಕ್ಷ ಮತ್ತು ನಿಧಾನಗತಿಯಿಂದ ಯಾವುದೇ ಜೀವ ಹಾನಿ ಆದರೆ ನಿರ್ದಾಕ್ಷೀಣ್ಯವಾಗಿ ಕ್ರಮ ಜರುಗಿಸಲಾಗುತ್ತದೆ. ತಂಡಗಳಾಗಿ ಶಂಕಿತ ಪ್ರಕರಣಗಳಿರುವ ಗ್ರಾಮಗಳಿಗೆ ಅಧಿಕಾರಿ, ಸಿಬ್ಬಂದಿಗಳು ಭೇಟಿ ನೀಡಿ, ಜನರಿಗೆ ರೋಗಗಳ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಅವರು ಹೇಳಿದರು.

ಜಿಲ್ಲಾ ಆರೋಗ್ಯ ಅಧಿಕಾರಿ ಪ್ರತಿ ದಿನ ಡೆಂಗ್ಯೂ ಪ್ರಕರಣಗಳ ಕುರಿತು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಂದ ಮಾಹಿತಿ ಸಂಗ್ರಹಿಸಿ, ಜಿಲ್ಲಾಡಳಿತಕ್ಕೆ ಕಳುಹಿಸಬೇಕು. ಜಿಲ್ಲೆಯ ಗ್ರಾಮ ಪಂಚಾಯತವಾರು ಹಮ್ಮಿಕೊಳ್ಳುವ ಐಇಸಿ ಕಾರ್ಯಕ್ರಮಗಳ ಕುರಿತು ಪಟ್ಟಿ ತಯಾರಿಸಿ, ಸಲ್ಲಿಸಬೇಕು.

ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಮತ್ತು ಕೀಟಜನ್ಯ ರೋಗಗಳ ನಿಯಂತ್ರಣದಲ್ಲಿ ಆರೋಗ್ಯ, ಕಂದಾಯ, ಪಂಚಾಯತ ರಾಜ್ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಜಂಟಿಯಾಗಿ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.

ವಾರದಲ್ಲಿ ಎರಡು ದಿನ ಡ್ರೈ ಡೆ ಮಾಡಿ: ಕೀಟಜನ್ಯ ರೋಗಗಳಾದ ಡೆಂಗ್ಯೂ, ಚಿಕನ್‍ಗುನ್ಯಾ ಪ್ರಕರಣಗಳ ನಿಯಂತ್ರಣದಲ್ಲಿ ಡ್ರೈ ಡೆ ಮಾಡುವುದು ಮುಖ್ಯವಾಗಿದೆ.

ಗ್ರಾಮದ ನೀರು ಸರಬರಾಜು ವೇಳೆಯನ್ನು ತಿಳಿದುಕೊಂಡು, ನೀರು ಸರಬರಾಜು ಆಗುವ 12 ಗಂಟೆ ಮೊದಲು ನೀರು ಸಂಗ್ರಹಿಸುವ ಪರಿಕರಗಳನ್ನು ಚನ್ನಾಗಿ ತೊಳೆದು, ಒಣ ಅರಿವೆಯಿಂದ ಒರಸಿ ಇಡಬೇಕು. 12 ತಾಸುಗಳ ನಂತರ ನೀರು ಬಂದ ಮೇಲೆ ಮತ್ತೇ ಅವುಗಳಲ್ಲಿ ನೀರು ತುಂಬಬೇಕು. ಅರ್ಧ ಬಳಸಿ, ಉಳಿದ ನೀರಿನಲ್ಲಿ ಮತ್ತೇ ನೀರು ತುಂಬಬಾರದು.

ಮನೆ ಸುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಮನೆಯ ಸುತ್ತ ಯಾವುದೇ ರೀತಿಯ ತ್ಯಾಜ್ಯ ಸಂಗ್ರಹವಾಗದಂತೆ ನೋಡಿಕೊಳ್ಳಬೇಕು. ವಿಶೇಷವಾಗಿ ಪ್ಲಾಸ್ಟಿಕ ಬಾಟಲ್, ಟೈಯರ್ ಮುಂತಾದವುಗಳ ಬಗ್ಗೆ ಜಾಗೃತಿ ವಹಿಸಬೇಕು. ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕೆಂದು ಅವರು ತಿಳಿಸಿದರು.

ಕೂಲಿ ಕೆಲಸಕ್ಕೆ ತೆರಳುತ್ತಿದ್ದವರ ಮೇಲೆ ಕಾಡಾನೆ ದಾಳಿ: ಕಾಲು ಮುರಿತ

ದರ್ಶನ್ ಕೇಸ್ ಬಗ್ಗೆ ಹುಬ್ಬಳ್ಳಿಯಲ್ಲಿ ಇಂದ್ರಜೀತ್‌ ಲಂಕೇಶ್ ಮಾತು

ಹಿಂದಿನ ಕೇಸ್‌ನಲ್ಲಿ ಕಠಿಣ ಕ್ರಮ ಕೈಗೊಂಡಿದ್ದರೆ, ಇಂದು ಇಂಥ ಪರಿಸ್ಥಿತಿ ಬರುತ್ತಿರಲಿಲ್ಲ: ಮಾಜಿ ಶಾಸಕ ಎ.ಟಿ.ರಾಮಸ್ವಾಮಿ

- Advertisement -

Latest Posts

Don't Miss