Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ವಿಶ್ವಯೋಗ ದಿನಕ್ಕೆ ನಿಜಕ್ಕೂ ಹೊಸದೊಂದು ಮೆರಗು ಸಿಕ್ಕಂತಾಗಿದೆ. ವರ್ಷದಿಂದ ವರ್ಷಕ್ಕೆ ಯೋಗಪಟುಗಳ ಸಂಖ್ಯೆ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿಂದು ಆಯೋಜಿಸಲಾಗಿದ್ದ ವಿಶ್ವಯೋಗ ದಿನಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಹೌದು..ಯೋಗದಿಂದ ರೋಗ ದೂರ ಎಂಬ ಮಾತಿನಂತೆ ಯೋಗದಿನಕ್ಕೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಉತ್ತಮ ಸ್ಪಂದನೆ ದೊರೆತಿದೆ. ಹುಬ್ಬಳ್ಳಿಯ ಜಿಮ್ ಖಾನ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಶಿಬಿರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕ ಮಹೇಶ ಟೆಂಗಿನಕಾಯಿ ಸೇರಿದಂತೆ ಬಹುತೇಕ ನಾಯಕರು ಭಾಗವಹಿಸಿ ಯೋಗದ ಆಸನಗಳ ಮೂಲಕ ಆರೋಗ್ಯಕರ ಸಂದೇಶ ನೀಡಿದ್ದಾರೆ.
ಇನ್ನೂ ಕ್ಷಮತಾ ಸೇವಾ ಸಂಸ್ಥೆ ಹಾಗೂ ಧನ್ಯಸ್ಮಿ ಯೋಗ ಕೇಂದ್ರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ವಿಶ್ವ ಯೋಗದಿನಕ್ಕೆ ವಾಣಿಜ್ಯನಗರಿ ಹುಬ್ಬಳ್ಳಿಯ ಬಹುತೇಕ ಕಡೆಯಿಂದಲೂ ಜನರು ಆಗಮಿಸಿ ವಿಶ್ವ ಯೋಗದಿನ ಯಶಸ್ವಿಗೊಳಿಸಿದರು.
‘ನೀವು ಮಂತ್ರಿಯಾಗಿದ್ದವರು, ಗಂಭೀರವಾಗಿರಿ. ರಾಜ್ಯದ ಮರ್ಯಾದೆ ತೆಗಿಬೇಡಿ’
ಕಾಗೋಡು ತಿಮ್ಮಪ್ಪರನ್ನು ಭೇಟಿಯಾದ ಕುಮಾರ್ ಬಂಗಾರಪ್ಪ: ಕಾಂಗ್ರೆಸ್ ಸೇರುವ ಸೂಚನೆಯೇ..?
ಬಸ್‌ನಲ್ಲಿ ಸೀಟ್‌ಗಾಗಿ ಕಿತ್ತಾಡಿದ ಮಹಿಳೆಯರು: ಜಡೆ ಜಗಳಕ್ಕೆ ಸರ್ಕಾರದ ಬಳಿ ಪರಿಹಾರ ಕೇಳಿದ ನೆಟ್ಟಿಗರು..