Wednesday, March 12, 2025

Latest Posts

Ayodhya News: ಅಯೋಧ್ಯೆಯ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ

- Advertisement -

Ayodhya News: ಕೆಲ ದಿನಗಳ ಹಿಂದಷ್ಟೇ ರಾಮಮಂದಿರದ ಪ್ರಧಾನ ಅರ್ಚಕರಾದ ಸತ್ಯೇಂದ್ರ ದಾಸ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅಂದಿನಿಂದ ಚಿಕಿತ್ಸೆ ನಡೆಯುತ್ತಿತ್ತಾದರೂ, ಚಿಕಿತ್ಸೆ ಫಲಿಸದೇ, ಸಂತ್ಯೇಂದ್ರ ದಾಸ್(85) ಅವರು ಇಂದು ಬೆಳಿಗ್ಗೆ 8 ಗಂಟೆಗೆ ಲಕ್ನೋನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಸತ್ಯೆಂದ್ರ ದಾಸ್ ಅವರು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದರು. ಅಲ್ಲದೇ ಮಧುಮೇಹವೂ ಇತ್ತು. ಫೆಬ್ರವರಿ 3ರಂದು ಶುಗರ್ ಮತ್ತು ಬಿಪಿ ಎರಡೂ ಏರಿಕೆಯಾಗಿದ್ದು, ಸತ್ಯೇಂದ್ರ ದಾಸ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಕೂಡ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅರ್ಚಕರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.

ಆದರೆ ಚಿಕಿತ್ಸೆ ಫಲಿಸದೇ, ಆಚಾರ್ಯ ಸತ್ಯೇಂದ್ರ ದಾಸ್ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಅರ್ಚಕರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

- Advertisement -

Latest Posts

Don't Miss