- Advertisement -
ಕರೊನಾ ಸೋಂಕನ್ನ ತಡೆಗಟ್ಟುವ ಸಲುವಾಗಿ ರೋಗ ನಿರೋಧಕ ಶಕ್ತಿ ಹೆಚ್ಚಿಸೋ ಹೋಮಿಯೋಪತಿ ಹಾಗೂ ಆರ್ಯುವೇದಿಕ್ ಔಷಧಿಗಳನ್ನ ಉಚಿತವಾಗಿ ಹಂಚುವ ಕಾರ್ಯಕ್ರಮವನ್ನ ಯಲಹಂಕ ಉಪನಗರದ ಬಿಬಿಎಂಪಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯದ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಸ್.ಆರ್ ವಿಶ್ವನಾಥ್ ಸಾರ್ವಜನಿಕರಿಗೆ ಉಚಿತ ಔಷಧಿ ಹಂಚಿಕೆ ಮಾಡಿದ್ರು.
ಇನ್ನು ಕಾರ್ಯಕ್ರಮದಲ್ಲಿ ಪಾಲಿಕೆಯ ಮಾಜಿ ಸದಸ್ಯ ಮುನಿರಾಜು, ಪಾಲಿಕೆ 4 ವಾರ್ಡ್ಗಳ ಮಹಿಳಾ ಮೋರ್ಚಾದ ಅಧ್ಯಕ್ಷೆ ಬೃಂದಾ ವಿರೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ನಾಗೇಂದ್ರ ಆರೂಡಿ, ಕರ್ನಾಟಕ ಟಿವಿ ಬೆಂಗಳೂರು.
- Advertisement -