International news updates
PATNA: ಬಿಹಾರದ ಮುಖ್ಯಮಂತ್ರಿಯಾಗಿ 8ನೇ ಬಾರಿಗೆ ಇಂದು ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಹಾಘಟಬಂಧನ್ ಸರ್ಕಾರದ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿತೀಶ್ ಕುಮಾರ್ ಅವರಿಗೆ ಪಾಟ್ನಾದ ರಾಜಭವನದಲ್ಲಿ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.
ಉಪಮುಖ್ಯಮಂತ್ರಿಯಾಗಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿನ್ನೆಯಷ್ಟೇ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡಿದ್ದ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಿತೀಶ್ ಕುಮಾರ್ ಅವರಿಗೆ ಪಾಟ್ನಾದ ರಾಜಭವನದಲ್ಲಿ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಇಂದು ಮಹಾಘಟಬಂಧನ್ ಸರ್ಕಾರದ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
9 ಪಕ್ಷಗಳ ಮಹಾಘಟಬಂಧನ್ ನಾಯಕರಾಗಿ ನಿತೀಶ್ ಕುಮಾರ್ ಆಯ್ಕೆಯಾಗಿದ್ದಾರೆ. RJD, ಕಾಂಗ್ರೆಸ್, JD(U), CPI, CPIML ಮತ್ತು ಇತರರು ಸೇರಿದಂತೆ ಎಡ ಪಕ್ಷಗಳು ನಿತೀಶ್ ಕುಮಾರ್ ರನ್ನು ಸಿಎಂ ಆಗಿ ಆಯ್ಕೆ ಮಾಡಿದ್ದವು. ನಿನ್ನೆ ಬಿಜೆಪಿ- ಜೆಡಿಯು ಮೈತ್ರಿ ಸರ್ಕಾರದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ರಾಜ್ಯಪಾಲರಿಗೆ 164 ಶಾಸಕರ ಪಟ್ಟಿಯನ್ನು ಸಲ್ಲಿಸಿದ್ದರು. ಬಳಿಕ ಇಂದು ಪ್ರಮಾಣವಚನ ಸ್ವೀಕರಿಸಲು ರಾಜ್ಯಪಾಲರು ನಿತೀಶ್ ಕುಮಾರ್ ಅವರನ್ನು ಆಹ್ವಾನಿಸಿದ್ದರು.
ಇಂದು ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಹಾಗು ಉಪಮುಖ್ಯಮಂತ್ರಿಯಾಗಿ ತೇಜಸ್ವಿ ಯಾದವ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆದರೆ, ಆಗಸ್ಟ್ 15ರ ಬಳಿಕ ಸಂಪುಟ ವಿಸ್ತರಣೆಯಾಗಲಿದೆ ಎನ್ನಲಾಗಉತ್ತಿದೆ. ಬಿಜೆಪಿಯೊಂದಿಗೆ ನಿತೀಶ್ ಕುಮಾರ್ ಹೊಂದಿದ್ದ ಸಚಿವ ಸಂಪುಟ ಹಂಚಿಕೆಯ ಸೂತ್ರವನ್ನೇ ಆರ್‌ಜೆಡಿ ಮತ್ತು ಜೆಡಿಯು ಅಳವಡಿಸಿಕೊಳ್ಳುವ ಸಾಧ್ಯತೆಯಿದೆ. ಹಣಕಾಸು, ರಸ್ತೆ ನಿರ್ಮಾಣ, ಪಟ್ಟಣ ಯೋಜನೆ, ಕೃಷಿ ಮತ್ತು ಭೂ ಕಂದಾಯ ಖಾತೆಗಳನ್ನು ನೀಡುವಂತೆ ಆರ್‌ಜೆಡಿ ಒತ್ತಾಯಿಸುತ್ತಿದೆ ಎಂದು ಕೆಲವೊಂದು ಬಲ್ಲ ಮೂಲಗಳು ತಿಳಿಸಿವೆ.
ಚೀನಾದ BRI ಸಾಲದ ವಿರುದ್ಧ ಎಚ್ಚರಿಸಿದ ಬಾಂಗ್ಲಾದೇಶ ಸಚಿವ, ಶ್ರೀಲಂಕಾದ ಉದಾಹರಣೆಯ ಉಲ್ಲೇಖ