Political News: ಪೋಕ್ಸೋ ಕೇಸ್ ಅಡಿಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್‌ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಕೇಸ್ ಸಂಬಂಧ ಸಲ್ಲಿಕೆಯಾಗಿರುವ ಆರೋಪಪಟ್ಟಿಯ ವಿಚಾರಣೆಗಾಗಿ ಸಮನ್ಸ್ ಜಾರಿ ಮಾಡಲಾಗಿದೆ.
ಕೆಲ ದಿನಗಳ ಹಿಂದಷ್ಟೇ ಈ ಕೇಸ್ ಬಗ್ಗೆ ವಿಚಾರಣೆಯಾಗಿ, ಕರ್ನಾಟಕ ಹೈ ಕೋರ್ಟ್ ರಿಲೀಫ್ ನೀಡಿತ್ತು. ಪ್ರಕರಣ ರದ್ದತಿಗಾಗಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈ ಕೋರ್ಟ್, ನಿರೀಕ್ಷಣಾ ಜಾಮೀನು ನೀಡಿತ್ತು. ಆದರೆ ಪ್ರಕರಣ ರದ್ದು ಮಾಡಲು ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್‌ದ ಪೀಠ ನಿರಾಕರಿಸಿತ್ತು. ಹೀಗಾಗಿ ಯಡಿಯೂರಪ್ಪ ಅವರನ್ನು ಅರೆಸ್ಟ್ ಮಾಡದಿದ್ದರೂ, ವಿಚಾರಣೆ ನಡೆಸಬೇಕಿದೆ. ಆದ್ದರಿಂದ ಬೆಂಳೂರಿನ ಕೋರ್ಟ್‌ನಲ್ಲಿ ವಿಚಾರಣೆಗೆ ದಿನ ನಿಗದಿಯಾಗಿದೆ.
ಏನಿದು ಪ್ರಕರಣ..?
ಬಾಲಕಿಯೊಬ್ಬಳ ಮೇಲೆ ಮಾಜಿ ಸಿಎಂ ಯಡಿಯೂರಪ್ಪ ಲೈಂಗಿಕ ದೌರ್ಜನ್ಯವೆಸಗಿದ್ದಾರೆಂದು ಸಂತ್ರಸ್ತೆಯ ತಾಯಿ ಬೆಂಗಳೂರಿನ ಸದಾಶಿವ ನಗರದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಕಳೆದ ವರ್ಷ ಓರ್ವ ಬಾಲಕಿ ಯಾವುದೇ ಸಮಸ್ಯೆಗೆ ಪರಿಹಾರ ಕೇಳಲು ಮಾಜಿ ಸಿಎಂ ಯಡಿಯೂರಪ್ಪ ಮನೆಗೆ ಹೋದಾಗ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ, ಯಡಿಯೂರಪ್ಪ ಸೇರಿ 53 ಮಂದಿ ವಿರುದ್ಧ ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. 2024ರ ಮೇ ತಿಂಗಳಲ್ಲಿ ದೂರುದಾರೆ ಸಾವನ್ನಪ್ಪಿದರು. ಇದೀಗ ಮತ್ತೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಸಮನ್ಸ್ ಜಾರಿ ಮಾಡಲಾಗಿದೆ.