Friday, November 22, 2024

Latest Posts

B Sriramulu ಖಾಸಗಿ ಬಸ್ ಪಲ್ಟಿ ಮೃತರ ಹಾಗೂ ಗಾಯಾಳುಗಳಿಗೆ ಪರಿಹಾರ ಘೋಷಣೆ..!

- Advertisement -

ತುಮಕೂರು : ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ (Pavagada taluk of Tumkur district) ಪಳವಳ್ಳಿಕಟ್ಟೆಯ ಕೆರೆ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ 8 ಮಂದಿ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತವಾಗಿದ್ದು, ಬಸ್‌ನಲ್ಲಿದ್ದ 25ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ (Jurisdiction of the Pavagada Police Station) ಪ್ರಕರಣ ದಾಖಲು ಮಾಡಲಾಗಿದೆ. ಖಾಸಗಿ ಬಸ್ ಅಪಘಾತಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ಬಿ. ಶ್ರೀರಾಮುಲು (Transport Minister B. Sriramulu) ಪ್ರತಿಕ್ರಿಯೆ ನೀಡಿದ್ದು, ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಬಸ್ ಫಿಟ್‌ನೆಟ್ (Bus Fitness) ಸೇರಿದಂತೆ ಎಲ್ಲ ದಾಖಲೆಗಳ ಪರಿಶೀಲಿಸಲಾಗುತ್ತದೆ. ಪರಿಶೀಲನೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮೃತರ ಕುಟುಂಬಸ್ಥರು, ಗಾಯಾಳುಗಳಿಗೆ ಆರ್ಥಿಕ ಸಹಾಯ ಮಾಡುತ್ತೇವೆ. RTO ಅಧಿಕಾರಿಗಳ ತಪ್ಪಿದ್ದರೂ ಕೂಡಲೇ ಕ್ರಮಕೈಗೊಳ್ಳುತ್ತೇವೆ ಎಂದು ಸಾರಿಗೆ ಇಲಾಖೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ರಕ್ಷಣಾ ಸಿಬ್ಬಂದಿ, ದುರಂತ ಸ್ಥಳಕ್ಕೆ ತಕ್ಷಣ ಧಾವಿಸಿ ಎಲ್ಲಾ ರಕ್ಷಣಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ದೊರಕಿಸಲು ನಿರ್ದೇಶಿಸಿದ್ದೇನೆ. ಜಿಲ್ಲಾ ಎಸ್​ಪಿ ಸ್ಥಳಕ್ಕೆ ತೆರಳಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಜವಾಬ್ದಾರಿ ನಿರ್ವಹಿಸುವಂತೆ ಸೂಚಿಸಲಾಗಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ (Home Minister Aaraga Gnanendra) ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಅಪಘಾತವಾದ ಖಾಸಗಿ ಬಸ್‌ನ ಎಲ್ಲಾ ದಾಖಲೆಗಳು ಸರಿಯಾಗಿವೆ ಪಲ್ಟಿಯಾದ ಖಾಸಗಿ ಬಸ್‌ನ ಎಲ್ಲಾ ದಾಖಲೆಗಳು ಸರಿಯಾಗಿವೆ ಎಂದು ಸಾರಿಗೆ ಇಲಾಖೆ ಜಂಟಿ ಆಯುಕ್ತ ನರೇಂದ್ರ ಹೋಳ್ಕರ್ ಹೇಳಿದ್ದಾರೆ. ಪಲ್ಟಿಯಾದ ಖಾಸಗಿ ಬಸ್‌ನಲ್ಲಿ ಓವರ್ ಲೋಡ್ ಮಾಡಿದ್ದರು. ಅತಿ ವೇಗವಾಗಿ ಬಸ್ ಚಾಲನೆಯಿಂದ ನಿಯಂತ್ರಣ ತಪ್ಪಿ ಬಸ್ ಪಲ್ಟಿ ಆಗಿದೆ. ಸ್ಥಳಕ್ಕೆ ತೆರಳಿ ಪರಿಶೀಲನೆ ಬಳಿಕ ಎಲ್ಲ ಮಾಹಿತಿ ಸಿಗಲಿದೆ ಜಂಟಿ ಆಯುಕ್ತ ನರೇಂದ್ರ ಹೋಳ್ಕರ್ ತಿಳಿಸಿದ್ದಾರೆ.

- Advertisement -

Latest Posts

Don't Miss