www.karnatakatv.net: ರಾಜ್ಯ- ಮೈಸೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಪಾದಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಕುರಿತು ಬಿಜೆಪಿ ಹೈಕಮಾಂಡ್ ಈಗಾಗಲೇ ಸ್ಪಷ್ಟಪಡಿಸಿದೆ. ಹಾಗಾಗಿ, ಪದೇ-ಪದೇ ಈ ವಿಚಾರದ ಬಗ್ಗೆ ಚರ್ಚೆ ಬೇಡವೆಂದ್ರು. ಯಾರಾದರೂ ದೆಹಲಿಗೆ ಹೋಗಿದ್ರೆ ಅದು ಅವರ ವೈಯಕ್ತಿಕ ವಿಚಾರ. ದೆಹಲಿಗೆ ಹೋದ ತಕ್ಷಣ ಅದಕ್ಕೆ ರಾಜಕೀಯ ಬಣ್ಣ ಬಳಿಯುುವುದು ಬೇಡ ಎಂದ್ರು. ಇನ್ನು, ನಾನು ಚುನಾವಣೆಗೆ ನಿಲ್ಲಬೇಕೋ, ಬೇಡವೋ ಎಂಬುದು 2 ವರ್ಷಗಳ ನಂತರ ತೀರ್ಮಾನವಾಗುತ್ತದೆ. ಅದನ್ನ ಬಿಜೆಪಿ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದ್ರು. ಇದೇ ವೇಳೆ, ಕಾಂಗ್ರೆಸ್ ವಿರುದ್ಧ ಹರಿಹಾಯ್ದ ವಿಜಯೇಂದ್ರ, ಜನರ ನೋವಿಗೆ ಸ್ಪಂದಿಸುವುದನ್ನ ಮರೆತು, ಹಾದಿ ಬೀದಿಯಲ್ಲಿ ನಿಂತು ಮುಂದಿನ ಸಿಎಂ ಅಭ್ಯರ್ಥಿ ಬಗ್ಗೆ ಮಾತಾಡ್ತಾರೆ. ಕಾಂಗ್ರೆಸ್ ಪಕ್ಷ ಎಲ್ಲಾ ವಿಚಾರಗಳಲ್ಲೂ ರಾಜಕಾರಣ ಮಾಡುತ್ತಿದೆ ಎಂದು ಗುಡುಗಿದ್ರು.