Friday, December 27, 2024

Latest Posts

ಬಾಬುಸಾಬ್‌ ಪಾಳ್ಯ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ

- Advertisement -

Bengaluru News: ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು 8 ಜನ ಸಾವನ್ನಪ್ಪಿದ್ದು, ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು, ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ 8 ಜನರ ಸಾವು ಸಂಭವಿಸಿದ್ದು, ಅವರ ಶವಗಳನ್ನು ಹೊರತೆಗೆಯಲಾಗಿದೆ. ಉಳಿದಂತೆ 8 ಜನರನ್ನು ರಕ್ಷಣೆ ಮಾಡಲಾಗಿದೆ. ಅವರಲ್ಲಿ ಆರು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಳಿದವರಿಗೆ ಗಂಭೀರ ಗಾಯಗಳಾಗಿವೆ. ರಕ್ಷಣೆ ಮಾಡಿರುವವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನುವುದು ತುಸು ಸಮಾಧಾನಕರ ಸಂಗತಿ ಎಂದರು.

ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸುತ್ತಿದೆ. ಸಾವನ್ನಪ್ಪಿರುವ 8 ಜನರಿಗೆ ತಲಾ ₹2 ಲಕ್ಷ ಕಾರ್ಮಿಕ ಇಲಾಖೆಯಿಂದ, ₹3 ಲಕ್ಷ ಬಿಬಿಎಂಪಿಯಿಂದ ಹೀಗೆ ಒಟ್ಟು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಣೆ ಮಾಡಲಾಗಿದೆ ಎಂದರು.

ಪರಿಹಾರ ನೀಡುವುದು ಸಾವಿನ ನಷ್ಟಕ್ಕೆ ಸಮನಾಗದು, ಆದರೆ ಸತ್ತವರು ಕೂಲಿ ಕಾರ್ಮಿಕರಾಗಿರುವುದರಿಂದ ಅವರ ಕುಟುಂಬದ ಬಗ್ಗೆ ನಾವೂ ಗಮನ ಹರಿಸಬೇಕಾಗುತ್ತದೆ. ಮೃತರ ಶವಗಳನ್ನು ಅವರ ಊರಿಗೆ ತಲುಪಿಸುವ ಕಡೆಯೂ ಪ್ರಯತ್ನ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

- Advertisement -

Latest Posts

Don't Miss