State News:
ಹನೂರು: ಹೆರಿಗೆಗಾಗಿ ಕರೆದೊಯ್ಯುತ್ತಿದ್ದ ವೇಳೆ ಗರ್ಭಿಣಿಯೊಬ್ಬರು 108 ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಶುಕ್ರವಾರ ಮಧ್ಯಾಹ್ನ ಚೆಂಗಡಿ ಕೌದಳ್ಳಿ ಮಾರ್ಗಮಧ್ಯದಲ್ಲಿ ಜರುಗಿದೆ.
ಹನೂರು ತಾಲೂಕಿನ ಚಂಗಡಿ ಗ್ರಾಮದ ವೆಂಕಟರಾಜು ರವರ ಪತ್ನಿ ವಿಶಾಲಾಕ್ಷಿ ಅವರಿಗೆ ಶುಕ್ರವಾರ ಬೆಳಿಗ್ಗೆ 10 ರ ವೇಳೆಯಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ಕುಟುಂಬಸ್ಥರ ಈಕೆಯನ್ನು ಕೌದಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲು ಆಂಬುಲೆನ್ಸ್ ಗೆ ಕರೆ ಮಾಡಿದ್ದಾರೆ . ತಕ್ಷಣ ಚಂಗಡಿ ಗ್ರಾಮಕ್ಕೆ ತೆರಳಿದ ಆಂಬುಲೆನ್ಸ್ ನಲ್ಲಿ ಕೌದಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದೆ.ಈ ವೇಳೆ ತುರ್ತು ವೈದ್ಯಕೀಯ ಸಿಬ್ಬಂದಿ ನಾಗರಾಜು ಹಾಗೂ ಚಾಲಕ ಮಲ್ಲೇಶ್ ಅವರ ಸಹಕಾರ ಪಡೆದು ತಾಯಿ ಮಗುವನ್ನು ಆರೈಕೆ ಮಾಡಿ ಬಳಿಕ ಕೌದಳ್ಳಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಯಿತು. ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ ಎಂದು ಆಂಬ್ಯುಲೆನ್ಸ್ ತುರ್ತು ವಾಹನದ ಸಿಬ್ಬಂದಿ ನಾಗರಾಜು ಆಂದೋಲನಕ್ಕೆ ತಿಳಿಸಿದರು.
ಸಂಚಾರಕ್ಕೆ ತೊಂದರೆ : ವಡಕೆಹಳ್ಳ ಸಮೀಪದ ಅಡ್ಡರಸ್ತೆಯಿಂದ ಚಂಗಡಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯು ತೀವ್ರ ಹದಗೆಟ್ಟಿರುವುದರಿಂದ ಪಾದಚಾರಿಗಳು ಹಾಗೂ ದ್ವಿಚಕ್ರ ವಾಹನ ಸವಾರರು ಸಂಚರಿಸಲು ತೊಂದರೆಯಾಗಿದೆ. ಈ ಮಧ್ಯೆ ಗರ್ಭಿಣಿ ಮಹಿಳೆ ಯೋರ್ವರನ್ನು ಚೆಂಗಡಿ ಗ್ರಾಮದಿಂದ ಕೌದಳ್ಳಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲು ತೆರಳಿದ್ದ 108ಆಂಬ್ಯುಲೆನ್ಸ್
ಚಾಲಕ ಮಲ್ಲೇಶ್ ಹರಸಾಹಸಪಟ್ಟು ಗರ್ಭಿಣಿಗೆ ಯಾವುದೇ ತೊಂದರೆಯಾಗದಂತೆ ನಿಧಾನವಾಗಿ ಕೌದಳ್ಳಿ ಆಸ್ಪತ್ರೆಗೆ ಕರೆತಂದಿದ್ದಾರೆ.
ಗ್ರಾಮಸ್ಥರ ಆಕ್ರೋಶ : ಚಂಗಡಿ ಗ್ರಾಮವು ಮಲೆಮಹದೇಶ್ವರ ವನ್ಯಧಾಮ ವಲಯ ವ್ಯಾಪ್ತಿಯಲ್ಲಿ ಬರುವುದರಿಂದ ಗ್ರಾಮಕ್ಕೆ ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ತೊಂದರೆಯಾಗುತ್ತಿದೆ .ಈ ಹಿನ್ನೆಲೆ ಚೆಂಗಡಿ ಸ್ಥಳಾಂತರ ಕಾರ್ಯವು ಸುಮಾರು 6 ವರ್ಷಗಳಿಂದ ನಡೆಯುತ್ತಿದೆ. ಈಗಾಗಲೇ ಹನೂರು ತಾಲ್ಲೂಕಿನ ವೈಶಂಪಾಳ್ಯ ಗ್ರಾಮದ ಸಮೀಪ ನಿವೇಶನ ಗುರುತಿಸಲಾಗಿದೆ. ಆದರೆ ಸರ್ಕಾರದಿಂದ ಅನುದಾನ ಬಾರದೇ ಇರುವುದರಿಂದ ಸ್ಥಳಾಂತರ ಕಾರ್ಯ ಪೂರ್ಣವಾಗಿಲ್ಲ ಆದ್ದರಿಂದ ಸರ್ಕಾರ ಹಾಗೂ ಜನಪ್ರತಿನಿಧಿಗಳು ಈ ಕೂಡಲೇ ಚೆಂಗಡಿ ಗ್ರಾಮವನ್ನು ಸ್ಥಳಾಂತರ ಮಾಡಬೇಕು ಇಲ್ಲದಿದ್ದರೆ ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಕೊಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮಳವಳ್ಳಿಯಲ್ಲಿ ಅತ್ಯಾಚಾರಕ್ಕೀಡಾದ ಬಾಲಕಿ ದಿವ್ಯ ಕುಟುಂಬಕ್ಕೆ ಸಾಂತ್ವಾನ ಹೇಳಿದ ನಿಖಿಲ್ ಕುಮಾರಸ್ವಾಮಿ
ಕೆ.ಆರ್.ಪೇಟೆಯಲ್ಲಿ ಧಾರ್ಮಿಕ ಚಟುವಟಿಕೆಗೆ ಹೊಸ ಸ್ವರೂಪ: ಸುನೀಲ್ ಕುಮಾರ್
“ಸೋನಿಯಾ ಕಾಲು ಹಿಡಿದು ಸಿಎಂ ಆಗಿದ್ದ ಸಿದ್ರಾಮಣ್ಣ”: ನಳಿನ್‍ಕುಮಾರ್ ಕಟೀಲ್