Vijayapura News : ವಿಜಯಪುರದಲ್ಲಿ ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಮಗು ಸಾತ್ವಿಕ್ ರಕ್ಷಣೆಗೆ ಕಾರ್ಯಾಚರಣೆ ಮುಂದುವರಿದಿದೆ. ಘಟನಾ ಸ್ಥಳದಲ್ಲಿ ಹಿರಿಯ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ. ರಾತ್ರಿಯೆಲ್ಲ ರಕ್ಷಣಾ ಕಾರ್ಯಚರಣೆ ನಡೆದಿದ್ದು ಇನ್ನೂ ಮುಂದುವರೆದಿದೆ. ಮಗುವು ಬದುಕಿ ಬರಲೆಂದು ಎಲ್ಲರ ಹೃದಯ ಮಿಡಿಯುತ್ತಿವೆ.
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾನ ಗ್ರಾಮದ ತೋಟದಲ್ಲಿ ದುರಂತವೊಂದು ನಡೆದು ಹೋಗಿದೆ. ನಗು ನಗುತ್ತಾ ಆಟವಾಡುತ್ತಿದ್ದ 2 ವರ್ಷದ ಕಂದಮ್ಮವೊಂದು ಆಯತಪ್ಪಿ ಕೊಳವೆ ಬಾವಿಗೆ ಬಿದ್ದಿದೆ. ಸತೀಶ್, ಪೂಜಾ ದಂಪತಿಯ 2 ವರ್ಷದ ಮಗ ಸಾತ್ವಿಕ್ 16 ಅಡಿ ಆಳದ ಕೊಳವೆ ಬಾವಿಗೆ ಬಿದ್ದು ಸಾವು ಬದುಕಿನ ಮಧ್ಯೆ ಹೋರಾಟ ಆರಂಭಿಸಿದ್ದ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ, ಪೊಲೀಸರು, ಆರೋಗ್ಯ ಇಲಾಖೆ ಸಿಬ್ಬಂದಿ ಸಾತ್ವಿಕ್ನನ್ನ ರಕ್ಷಣೆ ಮಾಡುವ ಕಾರ್ಯಾಚರಣೆಗೆ ಇಳಿದಿದ್ದಾರೆ.
ಅಗ್ನಿಶಾಮಕ ದಳ, ಬೆಳಗಾವಿ, ಕಲಬುರ್ಗಿಯಿಂದ ಆಗಮಿಸಿರುವ ಎರಡು SDRF ತಂಡ, ಕೊಳವೆ ಬಾವಿ ಕೊರೆಯುವ ನುರಿತರ ತಂಡಗಳಿಂದ ನಿರಂತರ ಕಾರ್ಯಾಚರಣೆ ನಡೆಯುತ್ತಿದ್ದು, ಎರಡು ಹಿಟ್ಯಾಚಿ, ಬ್ರೇಕರ್‌ಗಳ ಬಳಕೆ ಮಾಡಲಾಗುತ್ತಿದೆ. ಘಟನಾ ಸ್ಥಳದಲ್ಲಿ ಕಿಕ್ಕಿರಿದು ಜನ ಸೇರಿದ್ದಾರೆ.
ಮಗು ಸಾತ್ವಿಕ್ ಮುಜಗೊಂಡ ಬದುಕಿ ಬರಲೆಂದು ಇಡೀ ಊರಿನ ಜನ ಲಚ್ಯಾಣ ಗ್ರಾಮದ ಸಿದ್ದಪ್ಪ ಮಹಾರಾಜರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ತಂದೆ-ತಾಯಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಗುವನ್ನು ಹೊರತೆಗೆದ ತಕ್ಷಣ ಪ್ರಥಮ ಚಿಕಿತ್ಸೆ ನೀಡಲು ವೈದ್ಯರ ತಂಡ, ಒಟ್ಟು ಮೂರು ಅಂಬುಲೆನ್ಸ್ ನಿಯೋಜನೆ ಸೇರಿ ಸಕಲ ಸಿದ್ದತೆಯನ್ನು ಮಾಡಿಕೊಳ್ಳಲಾಗಿದೆ.
ಇಷ್ಟಾರ್ಥಸಿದ್ಧಿಯ ಚಾಂಗದೇವನ ಯಮನೂರು ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರೋ ಪುಣ್ಯ ಭೂಮಿ! ಸ್ಥಳ ಮಹಾತ್ಮೆ ಏನು?
ಕಮೀಷನರೇಟ್ ಖಡಕ್ ಕಾರ್ಯಾಚರಣೆ: 11 ಬೈಕ್ ಪತ್ತೆ, ಇಬ್ಬರು ಆರೋಪಿತರು ಜೈಲಿಗೆ
ಗುಡ್ ಫ್ರೈಡೆ ಅಂಗವಾಗಿ ಶಾಂತಿ ಮೆರವಣಿಗೆ: ಹುಬ್ಬಳ್ಳಿಯಲ್ಲಿ ಕಳೆಗಟ್ಟಿದ ಸಂಭ್ರಮ