Political News: ದಾವಣಗೆರೆ ಸಂಸದ ಸಿದ್ದೇಶ್ವರ್ ಪತ್ನಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಅವರಿಗೆ ಸರಿಯಾಗಿ ಮಾತನಾಡು ಬರುವುದಿಲ್ಲ. ಅವರಿಗೆ ಭಾಷಣ ಮಾಡಲು ಬರುವುದಿಲ್ಲ. ಅವರು ಮನೆಯಲ್ಲಿ ಅಡುಗೆ ಮಾಡಲಿಕ್ಕೆ ಲಾಯಕ್ಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿದ್ದು, ಈ ಹೇಳಿಕೆ ದೇಶಾದ್ಯಂತ ವೈರಲ್ ಆಗಿದೆ.
ಮಹಿಳೆಯರು, ಸೆಲೆಬ್ರಿಟಿಗಳು ಸೇರಿದಂತೆ ಹಲವರು ಈ ಮಾತಿಗೆ ವಿರೋಧ ವ್ಯಕ್ತಪಡಿಸಿದ್ದು, ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಕೂಡ ಈ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ. ಸೈನಾ ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, ಸಮಾಜದಲ್ಲಿ ಮಹಿಳೆ ಅಬಲೆ ಅಲ್ಲ ಸಬಲೆ. ಪುರುಷರಂತೆ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಭಾಗವಹಿಸಬೇಕು ಎಂದು ಕಾಂಗ್ರೆಸ್ ಅಭಿಯಾನ ಆರಂಭಿಸಿತ್ತು. ಆದರೆ ಕರ್ನಾಟಕದ ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಮಹಿಳೆಯ ವಿರುದ್ಧ ಹೇಳಿಕೆ ನೀಡಿದ್ದಾರೆ. ಇದು ಕಾಂಗ್ರೆಸ್ ಮನಸ್ಥಿತಿ ತೋರಿಸುತ್ತದೆ ಎಂದಿದ್ದಾರೆ.