Bagalakote: ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯಲ್ಲಿ ನವಜಾತ ಹೆಣ್ಣು ಶಿಶು ಸಿಕ್ಕಿದ್ದು, ಸ್ಥಳೀಯರು ಮಗುವನ್ನು ರಕ್ಷಣೆ ಮಾಡಿದ್ದಾರೆ. ರಬಕವಿ ಬನಹಟ್ಟಿ ತಾಲೂಕಿನ ಜಗದಾಳ ಜನತಾ ಪ್ಲಾಟ್ ಕೇಂದ್ರದ ಬಳಿ ಈ ಘಟನೆ ನಡೆದಿದೆ.
ತಾಯಿಯಾದವಳು ಹೆತ್ತ ಬಳಿಕ ಹೆಣ್ಣು ಮಗು ಎಂದು ತಿಳಿದು, ಬಿಸಾಕಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಈ ಜಿಲ್ಲೆಯಲ್ಲಿ ನವಜಾತ ಶಿಶು ಪತ್ತೆ ಕೇಸ್ ಹೆಚ್ಚಳವಾಗಿದ್ದರೂ ಕೂಡ, ಈ ಬಗ್ಗೆ ಪ್ರಕರಣ ದಾಖಲಾಗುತ್ತಿದ್ದರೂ ಕೂಡ, ಅಧಿಕಾರಿಗಳು ಮಾತ್ರ ಮೌನ ವಹಿಸಿದ್ದಾರೆ. ಅಲ್ಲದೇ ಇದೇ ಪೊದೆಯಲ್ಲಿ ನವಜಾತ ಶಿಶು ಮತ್ತೆ ಪತ್ತೆಯಾಗಿದೆ.
ಮಗುವಿನ ಅಳುವ ಶಬ್ದ ಕೇಳಿ ಸ್ಥಳೀಯರು ಮಗುವಿನ ರಕ್ಷಣೆ ಮಾಡಿದ್ದಾರೆ. ಬಳಿಕ ಸ್ಥಳೀಯ ಪಂಚಾಯಿತಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಜಿಲ್ಲಾ ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇನ್ನು ಅಧಿಕಾರಿಗಳು ಬಂದು, ಮಗುವನ್ನು ಜಿಲ್ಲಾಸ್ಪತ್ರೆಗೆ ಕರೆದ“ಯ್ದಿದ್ದಾರೆ. ಬನಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.