Bagalakote: ಉಪಚುನಾವಣೆಯ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ವಾತಾವರಣ ಪೂರಕವಾಗಿದೆ: CM Siddaramaiah

Bagalakote News: ಈ ಬಾರಿ ಬಾಗಲಕೋಟೆ ಉಪಚುನಾವಣೆಗೆ ಸಿಎಂ ಸಿದ್ದರಾಮಯ್ಯ 5 ದಿನ ಪ್ರಚಾರ ಮಾಡಲಿದ್ದು, ಇಂದು ಕೂಡ ಪ್ರಚಾರ ಮುಂದುವರೆದಿದೆ.

ಪ್ರಚಾರಕ್ಕೂ ಮುನ್ನ ಮಾಧ್ಯಮದ ಜತೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ. ಇದು ನಮ್ಮ ಗೆಲುವಿನ ಸ್ಪಷ್ಟ ಸೂಚನೆ ಎಂದಿದ್ದಾರೆ.

ಉಪಚುನಾವಣೆಯ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ವಾತಾವರಣ ಪೂರಕವಾಗಿದೆ. ದಿವಂಗತ ಹೆಚ್.ವೈ.ಮೇಟಿಯವರು ಬಾಗಲಕೋಟೆಯ ಅಭಿವೃದ್ಧಿಗೆ ಶ್ರಮವಹಿಸಿದ್ದರು. ಮೇಟಿಯವರು ಎಲ್ಲ ವರ್ಗದವರ ಏಳಿಗೆಗಾಗಿ ಸೇವೆ ಸಲ್ಲಿಸಿದ ಅಜಾತಶತ್ರುವಾಗಿದ್ದರು. ಸರಳ, ಸಜ್ಜನ ಮೇಟಿಯವರ ನಿಧನದಿಂದ ಖಾಲಿಯಾಗಿರುವ ಶಾಸಕ ಸ್ಥಾನಕ್ಕೆ ಅವರ ಮಗನೇ ಆದ ಉಮೇಶ್ ಮೇಟಿಯವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಬಾಗಲಕೋಟೆಯಲ್ಲಿ ಅವರ ಗೆಲ್ಲುವ ವಿಶ್ವಾಸವಿದೆ ಎಂದು ಸಿಎಂ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನವರೇ ಆಗಿದ್ದ ಸಾದಿಕ್ ಪೈಲ್ವಾನ್ ಅವರ ಮನವೊಲಿಸಿ ಕಣದಿಂದ ಹಿಂದೆ ಸರಿಯುವಂತೆ ಮಾಡಲಾಗಿದೆ. ಸಚಿವ ಜಮೀರ್ ಅಹ್ಮದ್ ಅವರೂ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬಿಜೆಪಿಯವರು ಸೋಲಿನ ಭೀತಿಯಿಂದ ಮನಸಿಗೆ ಬಂದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಿಧನ ಹೊಂದಿದ ಶಾಸಕರ ಕುಟುಂಬದವರಿಗೆ ಟಿಕೆಟ್ ನೀಡುವುದು ಕಾಂಗ್ರೆಸ್ ಪಕ್ಷದ ಪ್ರತೀತಿಯಾಗಿದ್ದು, ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ನಿಧನ ಹೊಂದಿದ ಶಾಸಕರ ಕುಟುಂಬದವರಿಗೆ ಟಿಕೆಟ್ ನೀಡಲಾಗಿದೆ. ಎರಡೂ ಕಡೆ ನಾವೇ ಗೆಲ್ಲುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿಯವರು ತಮ್ಮ ಅವಧಿಯಲ್ಲಿ ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಲಿಲ್ಲ, ಕೃಷ್ಣಾ ಮೇಲ್ದಂಡೆ ಯೋಜನೆಯಡಿ ರೈತರಿಗೆ ಪರಿಹಾರ ನೀಡಲು ಆದ್ಯತೆ ನೀಡಲಿಲ್ಲ. ಬಾಗಲಕೋಟೆಯ ಅಭಿವೃದ್ಧಿಗೆ ಹೆಚ್.ವೈ.ಮೇಟಿಯವರ ಕೊಡುಗೆ ಅನನ್ಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

About The Author