- Advertisement -
Ballari News:
ಬಳ್ಳಾರಿಯಲ್ಲೊಂದು ಗಂಭೀರ ಅಪಘಾತ ನಡೆದಿದೆ. ಅಪಘಾತದಲ್ಲಿ ತಂದೆ ತಾಯಿ ಸಾವನ್ನಪ್ಪಿದ್ದು ಮಗುವಿನ ಪರಿಸ್ಥಿತಿ ಗಂಭೀರವಾಘಿದೆ. ದಂಪತಿ ಹಾಗು ಮಗು ಬೈಕ್ನಲ್ಲಿ ತೆರಳುತ್ತಿದ್ದಾಗ ಲಾರಿ ಡಿಕ್ಕಿಯಾಗಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕೌಲ್ಬಜಾರ್ ಫ್ಲೈಓವರ್ ಮೇಲೆ ಸಂಭವಿಸಿದೆ. ಬೈಕ್ನಲ್ಲಿ ತೆರಳುತ್ತಿದ್ದ ದಂಪತಿ ವೀರೇಶ್, ಅಂಜಲಿ ಹಾಗೂ ದಿನೇಶ್ ದುರ್ಮರಣ ಹೊಂದಿದ್ದಾರೆ. ಹನಿ ಎಂಬ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.
- Advertisement -