ಗುಜರಾತ್ ನಲ್ಲಿ ಮತಗಟ್ಟೆ ಸಮೀಕ್ಷೆ ಸಮಾಧಾನ ತಂದಿರುವುದಿಲ್ಲ: ಮಾಜಿ ಸಚಿವ ಸಂತೋಷ್ ಲಾಡ್

ಬಳ್ಳಾರಿ: ಗುಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರುವುದಿಲ್ಲವೆಂದು ತೋರಣಗಲ್ ನಲ್ಲಿ ಮಾಜಿ ಸಚಿವ ಸಂತೋಷ್ ಲಾಡ್ ಅವರು ಹೇಳಿದ್ದಾರೆ. ಗುಜರಾತ್ ನಲ್ಲಿ ಮತಗಟ್ಟೆ ಸಮೀಕ್ಷೆ ನಮಗೆ ಸಮಾಧಾನ ತಂದಿರುವುದಿಲ್ಲ. ಬಹಳಷ್ಟು ಸಂದರ್ಭದಲ್ಲಿ ಸಮೇಕ್ಷೆ ತಪ್ಪಾಗಿರುವ ಉದಾಹರಣೆಗಳು ಇವೆ. ಶೇ.೯೯ ರಷ್ಟು ಮೋದಿ ಹೆಸರಿನ ಮೇಲೆ ಚುನಾವಣೆ ಮಾಡುತ್ತಿದ್ದಾರೆ. ಬಿಜೆಪಿಯವರು ಮೋದಿ ಹೆಸರಿನಲ್ಲೆ ಚುನಾವಣೆ ಎದುರಿಸುತ್ತಿದ್ದಾರೆ.
ಗುಜರಾತ್ ನಲ್ಲಿ ಬಹಳಷ್ಟು ಜನರಿಗೆ ಅಲ್ಲಿನ ಸಿಎಂ ಹೆಸರೇ ಗೊತ್ತಿಲ್ಲ ಗುಜರಾತ್ ರಾಜ್ಯ ಅಭಿವೃದ್ಧಿಯಲ್ಲಿ ಬಹಳಷ್ಟು ಹಿಂದುಳಿದಿದೆ. ಬಿಜೆಪಿಯವರು ಅಭಿವೃದ್ಧಿ ಹೆಸರಿನಲ್ಲಿ ಚುನಾವಣೆ ಮಾಡುತ್ತಿಲ್ಲ ಮತ್ತು ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ ಎಂದು ಸಂಡೂರು ತಾಲೂಕಿನ ತೋರಣಗಲ್ ನಲ್ಲಿ ಸಂತೋಷ್ ಲಾಡ್ ಹೇಳಿದ್ದಾರೆ.

ಸಿದ್ದರಾಮಯ್ಯನವರನ್ನು ಭೇಟಿಯಾದ ಬಿಜೆಪಿ ಎಂಎಲ್ ಸಿ ಹೆಚ್.ಸಿ. ವಿಶ್ವನಾಥ್

ಶಾಸಕರಾದ ಹೆಚ್.ಹಾಲಪ್ಪ ನವರು…!

ಮೈ ತುಂಬಾ ಟ್ಯಾಟೂ ಹಾಕಿಸಿದ ಅಭಿಷೇಕ ಅಭಿಮಾನಿ…

About The Author