Banglore News:
ಬಳ್ಳಾರಿಯಲ್ಲಿ ವಿದ್ಯುತ್ ವ್ಯತ್ಯಯದಿಂದ ಆಗಿರೋ ಅನಾಹುತದ ಕುರಿತು ಸದನದಲ್ಲಿ ಇಂದು ಚರ್ಚೆಯಾಗಿದೆ. ವಿದ್ಯುತ್ ವ್ಯತ್ಯಯದಿಂದ ಬಳ್ಳಾರಿ ಸರಕಾರಿ ಆಸ್ಪತ್ರೆ ವಿಮ್ಸ್ನ ವೆಂಟಿಲೇಟರ್ಗಳಲ್ಲಿ ಸಮಸ್ಯೆ ಉಂಟಾಗಿ ರೋಗಿಗಳು ಮೃತಪಟ್ಟ ವಿಚಾರ ವಿಧಾನಸೌಧದಲ್ಲಿ ಇಂದು ಪ್ರತಿಧ್ವನಿಸಿತು. ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ‘ಇದು ಸರಕಾರದ ತಪ್ಪಿನಿಂದ ಆಗಿರುವ ಅನಾಹುತ. ಸರಿಯಾದ ರೀತಿಯಲ್ಲಿ ವ್ಯವಸ್ಥೆ ಮಾಡಿಕೊಳ್ಳದಿದ್ದುದು ತಪ್ಪು. ಮೃತಪಟ್ಟವರಿಗೆ ₹ 25ಲಕ್ಷ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು. ಸಿದ್ದರಾಮಯ್ಯ ಮಾತು ಮುಗಿಸಿದ ನಂತರ ಪ್ರತಿಕ್ರಿಯಿಸಿದ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಮಾಧುಸ್ವಾಮಿ, ‘ಪ್ರಕರಣದ ಬಗ್ಗೆ ವಿಷಾದವಿದೆ. ಆದರೆ ಸಿದ್ದರಾಮಯ್ಯ ಅವರು ಬಳಸಿರುವ ಭಾಷೆಯನ್ನು ಒಪ್ಪಲು ಆಗುವುದಿಲ್ಲ’ ಎಂದು ಹೇಳಿದರು. ಇದು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಯಿತು ಎಂದು ತಿಳಿದು ಬಂದಿದೆ.
“ನೆರೆಗೆ ಮೂಲ ಪುರುಷರು ಯಾರೆಂದು ದಾಖಲೆ ಬಿಡುಗಡೆ ಮಾಡ್ತೀನಿ” : ಆರ್ ಅಶೋಕ್