- Advertisement -
ಬೆಂಗಳೂರು : ಕೊರೊನಾ ಪರಿಸ್ಥಿತಿ ನಿರ್ವಹಣೆ ಕುರಿತು ಕಾಂಗ್ರೆಸ್ ನಾಯಕರು ಸಭೆ ನಡೆಸಿದ್ರು. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಕಾಂಗ್ರೆಸ್ ಕಾರ್ಯಪಡೆ ಸಭೆಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಕಾರ್ಯಪಡೆ ಮುಖ್ಯಸ್ಥ ರಮೇಶ್ ಕುಮಾರ್ ಹಾಗೂ ಸದಸ್ಯರು ಭಾಗವಹಿಸಿದ್ದರು. ಈ ವೇಳೆ ರಾಜ್ಯ ಸರ್ಕಾರದ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಎಷ್ಷಟರ ಮಟ್ಟಿಗೆ ಸಫಲವಾಗಿದೆ ಅಂತ ಚರ್ಚೆ ಮಾಡಲಾಯಿತು. ಜೊಜತೆಗೆ ಜನರು, ರೈತರುಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಯ್ತು.
ಶಿವಕುಮಾರ್ ಬೆಸಗರಹಳ್ಳಿ, ಕರ್ನಾಟಕ ಟಿವಿ, ಬೆಂಗಳೂರು
- Advertisement -