- Advertisement -
ಕರ್ನಾಟಕ ಟಿವಿ ಬೆಂಗಳೂರು : ಸಿಎಂ ಯಡಿಯೂರಪ್ಪ ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ಘೋಷಣೆ ಮಾಡಿರೋದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.. ಇದು ಶಾಕಿಂಗ್ ನ್ಯೂಸ್, ಇದನ್ನ ನಾವು ನಿರೀಕ್ಷೆ ಮಾಡಿರಲಿಲ್ಲ, ಇದು ಪ್ರಧಾನ ಮಂತ್ರಿ ನಿರ್ಧಾರಕ್ಕೆ ವಿರುದ್ಧವಾದ ನಿರ್ಧಾರ ಅಂತ ಡಿಕೆ ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯದ ಜನರ ಆರೋಗ್ಯ ಹಾಗೂ ಆರ್ಥಿಕ ಶಕ್ತಿ ಇಂಪಾರ್ಟೆಂಟ್. ಆದ್ರೆ, ಇಷ್ಟು ಬೇಗ ಲಾಕ್ ಸಡಿಲಿಕೆ ಅವಕಾಶ ಕೊಡುವ ಅವಶ್ಯಕತೆ ಇರಲಿಲ್ಲ ಅಂತ ಡಿಕೆ ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ..
ಶಿವಕುಮಾರ್ ಬೆಸಗರಹಳ್ಳಿ, ಕರ್ನಾಟಕ ಟಿವಿ, ಬೆಂಗಳೂರು
- Advertisement -