- Advertisement -
Banglore News : ಉದ್ದೇಶಪೂರ್ವಕವಾಗಿ ಚಾಲಕನೊಬ್ಬ ಬೀದಿ ನಾಯಿಯ ಮೇಲೆ ಕಾರು ಹರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಳ್ಳಂದೂರಿನ ಇಬ್ಬಲೂರಿನ ಎಂಬಸಿ ಪ್ರಿಸ್ಟಿನ್ ಅಪಾರ್ಟ್‌ಮೆಂಟ್ ಬಳಿ ಇತ್ತೀಚೆಗೆ ಈ ಘಟನೆ ನಡೆದಿದ್ದು, ಸಿಸಿಟಿವಿ ದೃಶ್ಯಾವಳಿಯನ್ನು ಸಾಮಾಜಿಕ ಮಾಧ್ಯಮ ಟ್ವಿಟರ್ನಲ್ಲಿ ಅಪ್ಲೋಡ್ ಮಾಡಲಾಗಿದೆ.
ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಪೊಲೀಸರನ್ನು ಆಗ್ರಹಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಬೆಂಗಳೂರು ನಗರ ಪೊಲೀಸರು ಘಟನೆ ಕುರಿತ ವಿವರ ಕೋರಿದ್ದಾರೆ.
ಸಾಮಾಜಿಕ ಮಾಧ್ಯಮ ಬಳಕೆದಾರರು ಘಟನೆಯ ಸಿಸಿಟಿವಿ ದೃಶ್ಯಗಳನ್ನು ಸಹ ಹಂಚಿಕೊಂಡಿದ್ದಾರೆ. ಬೆಂಗಳೂರು ಪೊಲೀಸರು ವಿಷಯ ತಿಳಿದು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ನರಳಾಡುತ್ತಿದ್ದ ನಾಯಿಯನ್ನು ಕಂಡ ಸ್ಥಳೀಯರು ರಕ್ಷಿಸಿ ಚಿಕಿತ್ಸೆ ಕೊಡಿಸಿದ್ದಾರೆ.
- Advertisement -