Banglore News: ಬೆಂಗಳೂರಿನಲ್ಲಿ ಮಹಿಳೆಯೋರ್ವರು ಕಂಡಕ್ಟರ್ ಟೋಪಿ ತೆಗೆಸಿದ ವೀಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಕಂಡಕ್ಟರ್ ಕರ್ತವ್ಯದ ವೇಳೆ ಟೋಪಿ ಧರಿಸಿದ್ದಕ್ಕೆ ಬೆಂಗಳೂರಿನ ಮಹಿಳೆಯೊಬ್ಬರು ಆಕ್ಷೇಪ ವ್ಯಕ್ತಪಡಿಸಿ ಅದನ್ನು ತೆಗೆಯುವಂತೆ ಮಾಡಿದ್ದಾರೆ.
ಘಟನೆಯ ವಿಡಿಯೋ ಮೈಕ್ರೋಬ್ಲಾಗಿಂಗ್ ತಾಣ ಟ್ವಿಟರ್‌ನಲ್ಲಿ ವೈರಲ್ ಆಗಿದೆ. ಬಿಎಂಟಿಸಿ ಅಧಿಕಾರಿಗಳ ಪ್ರಕಾರ, ಘಟನೆಯು 10-12 ದಿನಗಳ ಹಿಂದಿನದು. ಆದರೆ, ಅದಕ್ಕೆ ಸಂಬಂಧಿಸಿದ ವೀಡಿಯೊ ಮಂಗಳವಾರ ಬಹಿರಂಗವಾಗಿದೆ.
ವಾಟ್ಸಾಪಲ್ಲಿ ನೋಡ್ದೆ. ಆ ಮಹಿಳೆಯ ಹೃದಯದಲ್ಲಿ ತುಂಬಿದ ಕೋಮು ವಿಷದ ತೀವ್ರತೆಯನ್ನು ಅಳೆಯುವ ಯಂತ್ರವೊಂದಿದ್ರೆ ಅದರ ಮುಳ್ಳುಗಳೇ ಒಡೆದುಹೋಗುತ್ತಿದ್ವೆನೋ?. ಕುಂಕುಮ, ಮಾಲೆಗಳನ್ನು ಧರಿಸುವಂತೆ ಟೋಪಿಗೂ ಅವಕಾಶವಿದೆಎಂದಾಗಿದೆ ನನ್ನ ಭಾವನೆ. ಏನಿದ್ದರೂ ವಿಷ ಕಾರುತ್ತಿರುವ ಮಹಿಳೆಯ ಮುಂದೆಯೂ ಸೌಮ್ಯವಾಗಿ ನಡೆದುಕೊಂಡ ನಿರ್ವಾಹಕರಿಗೆ ನನ್ನದೊಂದು ಸಲಾಂ pic.twitter.com/RFaIXGuq3M
— Mohamed Haneef (@Mohamed47623244) July 11, 2023