- Advertisement -
Banglore news updates:
ಏಕಾಏಕಿ ಕೆಲಸದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ಬಿಸಿಯೂಟ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಸರ್ಕಾರವು ಯಾವುದೇ ಪರಿಹಾರ ನೀಡದೇ 6,500 ಕಾರ್ಯಕರ್ತೆಯರನ್ನು ವಜಾ ಮಾಡಿದೆ. ರಾಜ್ಯ ಸರ್ಕಾರದ ಈ ಕ್ರಮವನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದು ಕಾರ್ಯಕರ್ತೆಯರು ದೂರಿದ್ದಾರೆ. ಸರ್ಕಾರದ ನಡೆಯನ್ನು ಖಂಡಿಸಿ ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ ಆರಂಭವಾಗಿ 2ನೇ ದಿನಕ್ಕೆ ಕಾಲಿಟ್ಟಿದೆ. ಸಿಐಟಿಯು ನಾಯಕಿ ವರಲಕ್ಷ್ಮೀ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದು ಮಕ್ಕಳು ಮಹಿಳೆಯರೊಂದಿಗೆ ಶೌಚಾಲಯವಿಲ್ಲದೆ ಪರದಾಟ ನಡೆಸಿದರು. ಪ್ರತಿಭಟನೆ ಕೈಬಿಡದ ಕಾರ್ಯಕರ್ತೆಯರು ಬಿ.ಸಿ.ನಾಗೇಶ್ ಸ್ಥಳಕ್ಕೆ ಬರಲೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಇಂದಿನಿಂದ ರಾಜ್ಯ ಪ್ರವಾಸ
- Advertisement -