Thursday, June 19, 2025

Latest Posts

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಯುವತಿ ಬಲಿ

- Advertisement -

Banglore News:

ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ರಕ್ಕಸ  ಮಳೆಗೆ  ಜನ ಜೀವನವೇ  ಅಸ್ತವ್ಯಸ್ತವಾಗಿದೆ. ರಣ ಮಳೆಗೆ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾಪುರದಲ್ಲಿ ಘಟನೆ ನಡೆದಿದೆ. ಅಖಿಲಾ (23) ಮೃತ ಯುವತಿ ಎಂದು  ತಿಳಿದು ಬಂದಿದೆ. ಬಿಕಾಂ ಪದವೀಧರೆಯಾಗಿದ್ದ ಅಖಿಲಾ,  ಖಾಸಗಿ ಶಾಲೆಯೊಂದರಲ್ಲಿ ಕಳೆದ ಎರಡು ವರ್ಷದಿಂದ ಅಡ್ಮಿನಿಸ್ಟ್ರೇಷನ್ ಡಿಪಾರ್ಟ್‍ಮೆಂಟ್‍ನಲ್ಲಿ ಕೆಲಸ ಮಾಡುತ್ತಿದ್ದರು. ತಂದೆ ತಾಯಿ ಜೊತೆಗೆ ಸಿದ್ದಾಪುರದಲ್ಲಿರುವ ಮನೆಯಲ್ಲಿ ವಾಸವಾಗಿದ್ದರು. ಆದರೆ ಸೋಮವಾರ ರಾತ್ರಿ 8 ಗಂಟೆಗೆ ಕೆಲಸ ಮುಗಿಸಿಕೊಂಡು ಶಾಲೆಯಿಂದ ಹೊರಟಿದ್ದರು. ರಾತ್ರಿ 9.30ಕ್ಕೆ ಸಿದ್ದಾಪುರ ಬಳಿ ಇರುವ ಮಯೂರ ಬೇಕರಿ ಸಮೀಪ ಬಂದಿದ್ದಾರೆ. ಈ ವೇಳೆ ಭಾರೀ ಮಳೆ ಸುರಿಯುತ್ತಿದ್ದ ರಸ್ತೆಯಲ್ಲಿ ಮಂಡಿಯುದ್ದಕ್ಕೆ ನೀರು ನಿಂತಿತ್ತು. ನೀರಿನ ಮಧ್ಯೆಯೇ ಸ್ಕೂಟರ್ ಚಲಾಯಿಸಿಕೊಂಡು ಬಂದ ಅಖಿಲಾ , ನೀರು ಹೆಚ್ಚಿದ್ದರಿಂದ ಸ್ಕೂಟರ್ ಇದ್ದಕ್ಕಿದ್ದಂತೆ ಆಫ್ ಆಗಿದೆ. ಈ ವೇಳೆ ಕೆಳಗೆ ಬೀಳುತ್ತಿದ್ದ ಅಖಿಲಾ ಸಹಾಯಕ್ಕೆ ಬಲ ಭಾಗದಲ್ಲಿಯೇ ಇದ್ದ ಎಲೆಕ್ಟ್ರಿಕಲ್ ಪೋಲ್ ಮುಟ್ಟಿದ್ದಾರೆ. ಈ ವೇಳೆ ವಿದ್ಯುತ್ ಸ್ಪರ್ಶವಾಗಿ ಸಾವನ್ನಪ್ಪಿದ್ದಾರೆ. ನಂತರ ಕೆಳಗೆ ಬಿದ್ದ ಯುವತಿಯನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಅಖಿಲಾ ಕೊನೆಯುಸಿರೆಳೆದಿದ್ದಾರೆ. ನೀರು ಹೊರ ಹೋಗಲು ಸರಿಯಾದ ವ್ಯವಸ್ಥೆ ಮಾಡದೇ, ಬೆಸ್ಕಾಂ ವಿದ್ಯುತ್ ಕಂಬಗಳ ಸರಿಯಾದ ನಿರ್ವಹಣೆ ಮಾಡದೇ ಇರುವುದೇ ಅಖಿಲಾ ಸಾವಿಗೆ ನೇರ ಕಾರಣ ಎಂದು ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳ ವಿರುದ್ಧ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ಘಟನಾ ಸ್ಥಳಕ್ಕೆ ವೈಟ್ ಫೀಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ವೈದೇಹಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಿದ್ದಾರೆ. ಬೆಸ್ಕಾಂ ಹಾಗೂ ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಯುವತಿ ಸಾವನ್ನಪ್ಪಿರುವ ಆರೋಪ ಇದೀಗ ಕೇಳಿಬಂದಿದೆ.

ಬಾಗಲಕೋಟೆ: ಸೆ.7, 8ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಜ್ಞಾನ ಸಮಾಜ, ದೇಶ ಹಾಗೂ ವಿಶ್ವದ ಒಳಿತಿಗೆ ಬಳಕೆಯಾಗಬೇಕು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಉಚಿತ ವಿದ್ಯುತ್ ಯೋಜನೆ ಸ್ಥಗಿತ: ಡಬ್ಬಲ್ ಎಂಜಿನ್ ಸರ್ಕಾರ ಡಬ್ಬಲ್ ದ್ರೋಹ ಎಸಗಿದೆ – ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ

- Advertisement -

Latest Posts

Don't Miss