- Advertisement -
Banglore news:
ಬೆಂಗಳೂರು: ತಂದೆಯ ಅಕ್ರಮ ಸಂಬಂಧಕ್ಕೆ ಬೇಸತ್ತು ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆಜೆ ನಗರದಲ್ಲಿ ನಡೆದಿದೆ. ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ಚಂದು[19]. ಚಂದು ತಂದೆಗೆ ಅಕ್ರಮ ಸಂಬಂಧ ಇತ್ತು ಎನ್ನಲಾಗಿದೆ. ಇದೇ ವಿಚಾರಕ್ಕೆ ಪ್ರತಿದಿನ ಅಪ್ಪ- ಮಗನ ಮಧ್ಯೆ ಗಲಾಟೆ ನಡೆಯುತಿತ್ತು. ನಿನ್ನೆ ರಾತ್ರಿ ಕೂಡ ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ಗಲಾಟೆ ನಡೆದಿದೆ. ನಂತರ, ಮಗ ಚಂದು ರೂಮ್ ಬಾಗಿಲು ಹಾಕಿಕೊಂಡಿದ್ದ. ಆದರೆ ಬೆಳಗ್ಗೆ ರೂಮ್ ಬಾಗಿಲು ತೆಗೆದ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -