Banglore News:
ಬೆಂಗಳೂರಲ್ಲಿ ಟೋಯಿಂಗ್ ಬಗ್ಗೆ ಅಂತಿಮ ತೀರ್ಮಾನವಾಗಿಲ್ಲ, ಮತ್ತೆ ಟೋಯಿಂಗ್ ಜಾರಿ ಇಲ್ಲ ಎಂಬುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಂಗಳೂರು ನಗರದಲ್ಲಿ ಸಾರ್ಗವಜನಿಕ ಸ್ನೇಹಿ ಮತ್ತು ಸುಗಮ ವಾಹನ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ವಿಸ್ತೃತವಾದ ಚರ್ಚೆ ಹಾಗೂ ತಜ್ಞರ ಸಲಹೆ ಪಡೆದು ತೀರ್ಮಾನ ಕೈಗೊಳ್ಳಲಾಗುವುದು. ಸಿಎಂ ಕೂಡಾ ಈ ಬಗ್ಗೆ ಚರ್ಚೆ ನಡೆಸಿದ್ದು ಟೋಯಿಂಗ್ ಬಗ್ಗೆ ಯಾವುದೇ ಅಂತಿಮ ತೀರ್ಮಾನವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರಿಂದ ಟೋಯಿಂಗ್ ವ್ಯವಸ್ಥೆ ಬಗ್ಗೆ ಇದ್ದ ಜನಾಕ್ರೋಶ ಹಾಗೂ ಕಿರುಕುಳಗಳ ಬಗ್ಗೆ ಬಂದ ದೂರುಗಳ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿತ್ತು. ಸದ್ಯ ಹಳೆಯ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸಲಾಗುವುದಿಲ್ಲ ಎಂದು ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಮಂಡ್ಯ: ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಸುಮಲತಾ ಅಂಬರೀಷ್
ಭಿಕ್ಷಾಟನೆ ತಡೆಗೆ ಸೂಕ್ತಕ್ರಮ ಕೈಗೊಳ್ಳಲಾಗುವುದು: ಕೋಟಾ ಶ್ರೀನಿವಾಸ ಪೂಜಾರಿ