Friday, June 2, 2023

Latest Posts

ಕನ್ನಡಿಗರಿಗೆ ಸಿಹಿ ಸುದ್ದಿ- ಕನ್ನಡದಲ್ಲೂ ಇನ್ಮುಂದೆ ಬ್ಯಾಂಕಿಂಗ್ ಪರೀಕ್ಷೆ..!

- Advertisement -

ನವದೆಹಲಿ: ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆ ನಡೆಸಬೇಕೆಂಬ ಒತ್ತಾಯಕ್ಕೆ ಕಡೆಗೂ ಕೇಂದ್ರ ಮಣಿದಿದೆ.

ಪ್ರದೇಶಿಕ ಗ್ರಾಮೀಣ ಬ್ಯಾಂಕ್ ಗಳ ನೇಮಕಾತಿಗಾಗಿ ಐಬಿಪಿಎಸ್ ನಡೆಸುವ ಪರೀಕ್ಷೆಯನ್ನು ಇನ್ನು ಮುಂದೆ ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ಕಲ್ಪಿಸಿದೆ. ಹೀಗಾಗಿ ಕನ್ನಡ ಸೇರಿದಂತೆ ಒಟ್ಟು 13 ಪ್ರಾದೇಶಿಕ ಭಾಷೆಗಳಾದ ಕನ್ನಡ, ತೆಲುಗು, ತಮಿಳು, ಮಳಯಾಳಂ, ಮರಾಠಿ, ಬೆಂಗಾಳಿ, ಅಸ್ಸಾಮಿ, ಕೊಂಕಣಿ, ಮಣಿಪುರಿ, ಒಡಿಯಾ,ಪಂಜಾಬಿ ಮತ್ತು ಉರ್ದು ಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.

ಈ ಕುರಿತಂತೆ ಲೋಕಸಭೆಯಲ್ಲಿಂದು ಪ್ರಸಕ್ತ ವರ್ಷದ ಆರ್ಥಿಕ ಸಮೀಕ್ಷೆ ಮಂಡನೆ ವೇಳೆ ಪ್ರಸ್ತಾಪ ಮಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ರು.

ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಕುಮಾರಸ್ವಾಮಿ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ರವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಕೇಂದ್ರದ ಈ ನಿರ್ಧಾರದಿಂದ ರಾಜ್ಯದ ಗ್ರಾಮೀಣ ಪ್ರದೇಶದ ಯುವಕರಿಗೆ ಬಹಳ ಅನುಕೂಲವಾಗಲಿದೆ ಅಂತ ಟ್ವೀಟ್ ಮಾಡಿದ್ದಾರೆ.

ಇನ್ನುಮುಂದೆ ಟ್ರಾಫಿಕ್ ರೂಲ್ಸ್ ಪಾಲಿಸದಿದ್ರೆ ಕಾದಿದೆ ಮಾರಿ ಹಬ್ಬ..!ಮಿಸ್ ಮಾಡದೇ ಈ ವಿಡಿಯೋ ನೋಡಿ

https://www.youtube.com/watch?v=BWyWxlm5Vpc
- Advertisement -

Latest Posts

Don't Miss