ಸರ್ಕಾರಿ ಶಾಲೆಯ ಶಿಥಿಲಾವಸ್ಥೆ ಹಾಗೂ ಮೂಲಸೌಕರ್ಯದ ಕೊರತೆಯನ್ನು ಪ್ರಶ್ನಿಸಿದ್ದಕ್ಕೆ ತಂದೆ ಮತ್ತು ಮಗನ ಮೇಲೆ ಭೀಕರ ಹಲ್ಲೆ ನಡೆಸಿರುವ ಘಟನೆ ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯಿಂದ ವರದಿಯಾಗಿದೆ. ಎಸ್ ‘ಈ ಅಮಾನುಷ ದಾಳಿಯಲ್ಲಿ ತಂದೆ ಮೃತಪಟ್ಟಿರುವುದು ಸದ್ಯ ಇಡೀ ದೇಶಾದ್ಯಂತ ತೀವ್ರ ಆಘಾತ ಮೂಡಿಸಿದೆ ನೋಡಿ..
ಹೌದು ‘ಸಿಜೆಪಿ ಸಂಘಟನೆಯ ಸ್ವಯಂಸೇವಕರಾದ ಶೇಕ್ ಅಬ್ದುಲ್ ಹಫೀಜ್ ಅವರು ಆಗಸ್ಟ್ 13ರಂದು ತಮ್ಮ ಗ್ರಾಮದ ಸರ್ಕಾರಿ ಶಾಲೆಗೆ ಭೇಟಿ ನೀಡಿ, ಅಲ್ಲಿನ ಮೂಲಸೌಕರ್ಯದ ಕೊರತೆಯನ್ನು ವೀಡಿಯೊ ಮಾಡಿ ಸಾರ್ವಜನಿಕವಾಗಿ ಎತ್ತಿ ತೋರಿಸಿದ್ದರು. ಶಾಲೆಯ ದುರಾವಸ್ಥೆಯನ್ನು ಪ್ರಶ್ನಿಸಿದ್ದಲ್ಲದೆ, ಇದರ ಬಗ್ಗೆ ಕ್ಷಮೆಯಾಚಿಸುವಂತೆ ದುಷ್ಕರ್ಮಿಗಳು ಹಫೀಜ್ ಅವರಿಗೆ ಬೆದರಿಕೆಯೊಡ್ಡಿದ್ದರು.
ಆದರೆ ಅಂದೇ ಸಂಜೆ ಶಸ್ತ್ರಸಜ್ಜಿತ ದುಷ್ಕರ್ಮಿಗಳ ಗುಂಪು ಹಫೀಜ್ ಅವರ ಮನೆಗೆ ಬಲವಂತವಾಗಿ ನುಗ್ಗಿ, ಹಫೀಜ್ ಹಾಗೂ ಅವರ ತಂದೆ ಜನಾಬ್ ಮಾಫಿಕ್ ಅವರ ಮೇಲೆ ಮಾರಣಾಂಗವಾಗಿ ಹಲ್ಲೆ ನಡೆಸಿದೆ. ಈ ಭೀಕರ ದಾಳಿಯಲ್ಲಿ ತಲೆಗೆ ತೀವ್ರ ಗಾಯಗೊಂಡಿದ್ದ ಮಾಫಿಕ್ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಕೊನೆಯುಸಿರೆಳೆದಿದ್ದಾರೆ!
ಈ ಘಟನೆಗೆ ಸಂಬಂಧಿಸಿದಂತೆ ಮೃತರ ಪತ್ನಿ ನೀಡಿದ ದೂರಿನ ಮೇರೆಗೆ ಇಂಡಾಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳೀಯ ಬಿಜೆಪಿ ನಾಯಕ ಅಷ್ಟಮ್ ಮಾಝಿ ಸೇರಿದಂತೆ ಒಟ್ಟು 8 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ತನಿಖೆ ಮುಂದುವರಿದಿದೆ.
ಮತ್ತೊಂದೆಡೆ, ದಾಳಿಕೋರರು ಬಿಜೆಪಿ ಕಾರ್ಯಕರ್ತರು ಎಂಬ ಆರೋಪವನ್ನು ಪಶ್ಚಿಮ ಬಂಗಾಳದ ಹಿರಿಯ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ಈ ಘಟನೆಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ. ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಫೀಜ್ ಅವರನ್ನು ಸಿಜೆಪಿ ನಾಯಕರು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ ಎನ್ನಲಾಗ್ತಿದೆ!
ಶಾಲೆಯ ದುಸ್ಥಿತಿಯನ್ನು ಪ್ರಶ್ನಿಸಿದ್ದಕ್ಕೆ ಒಬ್ಬ ತಂದೆಯ ಪ್ರಾಣವೇ ಹೋಗಿರುವುದು ನಿಜಕ್ಕೂ ದೊಡ್ಡ ದುರಂತ. ಈ ಅಮಾನವೀಯ ಕೃತ್ಯದ ಬಗ್ಗೆ ನಿಮ್ಮ ಅನಿಸಿಕೆಗಳೇನು? ಕಮೆಂಟ್ ಮಾಡಿ ತಿಳಿಸಿ.



