Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ ವಾಹನದ ಮೇಲೆ ಮರ ಉರುಳಿ ಬಿದ್ದಿದ್ದು, ಈ ವೇಳೆ ಬಸ್‌ನಲ್ಲಿದ್ದ ಹಲವು ಮಕ್ಕಳು ಗಾಯಗ“ಂಡಿದ್ದು, ಅವರನ್ನೆಲ್ಲ ಆಸ್ಪತ್ರೆಗೆ ದಾಖಲಿಸಿ. ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಆ ಬಸ್‌ನಲ್ಲಿದ್ದ ಓರ್ವ ಬಾಲಕಿ, ಯುಕೆಜಿ ಓದುತ್ತಿದ್ದ 6 ವರ್ಷದ ಬಾಲಕಿ ಚಿರನ್ವಿ ಮಾತ್ರ ಮೃತಳಾಗಿದ್ದಾಳೆ.
ಈಕೆ ಕಲ್ಲಡ್ಕದ ಶ್ರೀರಾಮ ಶಾಲೆಯ ವಿದ್ಯಾರ್ಥಿನಿಯಾಗಿದ್ದಳು. ಬಾಲಕಿಯ ಸಾವಿಗೆ ಶಾಲಾ ಆಡಳಿತ ಮಂಡಳಿ ಸಂತಾಪ ಸೂಚಿಸಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಭೇಟಿ ನೀಡಿದ ಸ್ಥಳೀಯ ಪೋಲೀಸರು, ಪರಿಶೀಲನೆ ನಡೆಸಿ, ಮರ ತೆರವು ಮಾಡಿ, ವಾಹನ ಸಂಚಾರಕ್ಕೆ ಅನುವು ಮಾಡಿಕ“ಟ್ಟಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಈ ಬಗ್ಗೆ ಸಂತಾಪ ಸೂಚಿಸಿದ್ದು, ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ಬಳಿ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಶಾಲಾ ಬಸ್ ಮೇಲೆ ಮರ ಬಿದ್ದು ಉಂಟಾದ ಅಪಘಾತದಲ್ಲಿ ಪುಟ್ಟ ಬಾಲಕಿ ಚಿರನ್ವಿ ಮೃತಪಟ್ಟಿರುವುದು ಅತ್ಯಂತ ವಿಷಾದನೀಯ. ಇದೇ ಘಟನೆಯಲ್ಲಿ ಹಲವು ಮಕ್ಕಳು ಗಾಯಗೊಂಡಿದ್ದು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಮೃತಪಟ್ಟ ಬಾಲಕಿಯ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಬಾಲಕಿಯ ಕುಟುಂಬದ ದುಃಖದಲ್ಲಿ ನಾವು ಭಾಗಿಯಾಗುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.




