Hubli News: ಹುಬ್ಬಳ್ಳಿ: ಮೈಸೂರಿನ ದಸರಾ ಹಬ್ಬದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಸ್ತಕಾ ಅವರನ್ನು ಆಯ್ಕೆ ಮಾಡಿರುವುದು ರಾಜ್ಯ ಸರ್ಕಾರದ ತುಷ್ಟಿಕರಣ ಹಾಗೂ ವೋಟ್ ಬ್ಯಾಂಕ್ ರಾಜಕಾರಣ. ಇದನ್ನು ಶ್ರೀರಾಮಸೇನಾ ಸೇನೆ ಖಂಡಿಸುತ್ತದೆ ಎಂದು ಶ್ರೀರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು..
ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಚಾಮುಂಡೇಶ್ವರಿ ಹಿಂದೂಗಳ ಆರಾಧ್ಯ ದೈವ ಈ ನಿಟ್ಟಿನಲ್ಲಿ ಮುಸ್ಲಿಂ ಮಹಿಳೆಯಿಂದ ಮೈಸೂರಿನ ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವುದು ಖಂಡನೀಯವಾಗಿದೆ. ಕಾಂಗ್ರೆಸ್ ಓಲೈಕೆಯ ಹಾಗೂ ವೋಟ್ ಬ್ಯಾಂಕ್ ರಾಜಕಾರಣ ಮಾಡುವ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆ ತರುವ ಕಾರ್ಯವನ್ನು ಮಾಡುತ್ತಿದೆ ಎಂದರು.
ಮುಸ್ಲಿಂರು ಏಕ ದೇವೋಪಾಸನ, ಅಲ್ಲಾಃನನ್ನು ಮಾತ್ರ ಪೂಜೆ ಮಾಡುತ್ತಾರೆ. ನಾವು ಬಹುದೇವೋಪಾಸನ ಈ ನಿಟ್ಟಿನಲ್ಲಿ ಮುಸ್ಲಿಂ ಮಹಿಳೆಯಿಂದ ಚಾಮುಂಡೇಶ್ವರಿ ದೇವಿಗೆ ಪೂಜೆ ಮಾಡುವುದು ದಸರಾ ಉದ್ಘಾಟನೆಗೆ ನಿರ್ಧಾರ ಕೈಗೊಂಡಿರುವುದು ತೀವ್ರ ಖಂಡನೀಯವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.