ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ಪ್ರಾಸಿಕ್ಯೂಷನ್ ವಿರುದ್ಧ ಸಿಎಂ ರಿಟ್ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೀತಿದೆ. ಇದರ ಬೆನಲ್ಲೇ ಸಿದ್ದರಾಮಯ್ಯ ಸಿಎಂ ಸ್ಥಾನ ಕೆಳೀತಾರಾ ಅನ್ನೋ ಚರ್ಚೆ ನಡೆದಿದೆ. ಅದ್ರಲ್ಲೂ ಮಾಜಿ ಸಿಎಂ ಬೊಮ್ಮಾಯಿ ಸಿಡಿಸಿರೋ ಹೊಸ ಬಾಂಬ್ ಭಾರೀ ಕುತೂಹಲ ಮೂಡಿಸಿದೆ.
ರಾಜ್ಯದ ರಾಜಕೀಯ ಇತಿಹಾಸ ನೋಡಿದಾಗ ಕಾಂಗ್ರೆಸ್‌ನಲ್ಲಿ ವೀರೇಂದ್ರ ಪಾಟೀಲರು ಅತ್ಯಂತ ಬಲಿಷ್ಠ ಮುಖ್ಯಮಂತ್ರಿ ಆಗಿದ್ರು. ಆದರೂ ಸ್ಥಾನಮಾನ ಬದಲಾವಣೆ ಮಾಡಿ ಆರ್.ಗುಂಡೂರಾವ್ ಮುಖ್ಯಮಂತ್ರಿ ಆದರು. ದೇವರಾಜ ಅರಸು ಅವರು ಎರಡನೇ ಬಾರಿ ಸ್ವಂತ ಶಕ್ತಿಯಲ್ಲಿ ಆರಿಸಿ ಸಿಎಂ ಆಗಿದ್ರು. ಎಸ್. ಬಂಗಾರಪ್ಪ ಅವರಿಗೆ 183 ಶಾಸಕರ ಬಲವಿತ್ತು. ಆಗಲೂ ಸಿಎಂ ಬದಲಾದರು. ಈ ರಾಜಕಾರಣ ಹೀಗೆ ನಡಿಯುತ್ತಲೇ ಇರುತ್ತದೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಕಾಂಗ್ರೆಸ್‌ನಲ್ಲಿ ಆಂತರಿಕವಾಗಿ ಗೊಂದಲ ಸೃಷ್ಟಿಯಾಗಿದೆ. ಮುಖ್ಯಮಂತ್ರಿಗಳ ಕುರ್ಚಿ ಅಲ್ಲಾಡುತ್ತಿದೆ ಅನ್ನುವ ಭಾವನೆ ರೂಪುಗೊಂಡಿದೆ. ಸಿಎಂ ಕುರ್ಚಿ ಮೇಲೆ ಕೂರಬೇಕೆಂಬ ಎಲ್ಲರ ಆಸೆ ಈಗ ಹೊರ ಹೊಮ್ಮುತ್ತಿದೆ ಎಂದು ಬೊಮ್ಮಾಯಿ ವ್ಯಂಗ್ಯವಾಡಿದ್ರು. ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆ ಹೇಳಿಕೆ ಬಗ್ಗೆ ವ್ಯಾಖ್ಯಾನಿಸಲ್ಲ. ಅವರ ಹೇಳಿಕೆ ನಂತರ ಕಾಂಗ್ರೆಸ್‌ನಲ್ಲಿ ಹಲವು ಪ್ರತಿಕ್ರಿಯೆಗಳು ಬಂದಿವೆ. ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ ಅನ್ನುವುದಕ್ಕೆ ಕೈ ನಾಯಕರ ಪ್ರತಿಕ್ರಿಯೆಯೇ ಸಾಕ್ಷಿ ಎಂದು ಮಾಜಿ ಸಿಎಂ ಬೊಮ್ಮಾಯಿ ತಿಳಿಸಿದ್ರು.
ಕಳೆದ ಒಂದೂವರೆ ವರ್ಷದಿಂದ ರಾಜ್ಯದಿಂದ ಯಾವುದೇ ಕೆಲಸ ಮಾಡಕ ಕಾರಣ ಸಿಎಂ ಸಿದ್ದರಾಮಯ್ಯ ಅವರು ಕುರ್ಚಿ ಅಲುಗಾಡುತ್ತಿದೆ. ಭ್ರಮನಿರಸನಗೊಂಡಿರುವ ಕಾಂಗ್ರೆಸ್ ಶಾಸಕರು ಘರ್ಷಣೆಗೆ ಇಳಿದಿದ್ದಾರೆ ಎಂದು ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.