ಹಾವೇರಿ: ಶೀಘ್ರಲ್ಲಿಯೇ ಗಂಗಾಮತಸ್ತ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ನಿನ್ನೆ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ (ರಿ) ವತಿಯಿಂದ ಸುಕ್ಷೇತ್ರ ನರಸೀಪುರದ ಗುರುಪೀಠದಲ್ಲಿ ಆಯೋಜಿಸಿರುವ ಶ್ರೀ ನಿಜಶರಣ ಅಂಬಿಗರಚೌಡಯ್ಯನವರ 5ನೇ ಶರಣ ಸಂಸ್ಕೃತಿ ಉತ್ಸವ, ಹಾಗೂ ಶ್ರೀ ನಿಜಶರಣ ಅಂಬಿಗರಚೌಡಯ್ಯನವರ 903ನೇ ಜಯಂತೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ನೇಪಾಳ ವಿಮಾನ ಪತನ : ಎಲ್ಲಾ ಪ್ರಯಾಣಿಕರು ಸಾವು
ಈಗಾಗಲೇ ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ಬಳಿ ಎಸ್.ಟಿ ಗೆ ಸೇರಿಸುವ ಕಡತವಿದ್ದು, ಕೇಂದ್ರ ಬುಡಕಟ್ಟು ಸಚಿವ ಅರ್ಜುನ್ ಮುಂಡ ಅವರನ್ನು ಭೇಟಿಯಾಗಿ ಚರ್ಚಿಸಿದ್ದು, ಅಂತಿಮ ಘಟ್ಟದಲ್ಲಿದೆ. ಸಚಿವ ಸಂಪುಟದಲ್ಲಿ ಅನುಮೋದಿಸಲಾಗುವುದು. ಅವರು ಕೇಳಿದ್ದ ಕೆಲವು ವಿವರಣೆಗಳನ್ನು ಕಳುಹಿಸಿಕೊಡಲಾಗಿದೆ. ಮಾತು ಕೊಟ್ಟಿದ್ದಂತೆ ಕೆಲಸ ಪ್ರಗತಿಯಲ್ಲಿದೆ. ಆದಷ್ಟು ಬೇಗನೆ ಅನುಮೋದನೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ : ರೋಡ್ ಶೋ ನಡೆಸಲಿರುವ ಮೋದಿ