ಬೆಂಗಳೂರು : ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆಯಲ್ಲಿ ಅಂತಾರಾಜ್ಯ ಜಲವಿವಾದದ ಕುರಿತಾಗಿ ಚರ್ಚಿಸಲು ಸಿಎಂ ಬಸವರಾಜ ಬೊಮ್ಮಯಿ ಸಭೆಯನ್ನು ಕರೆದಿದ್ದಾರೆ. ಜನವರಿ 22 ಭಾನುವಾರ ಸಭೆ ನಡೆಯಲಿದೆ. ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಯಲಿದ್ದು ಹಿರಿಯ ಅಧಿಕಾರಿಗಳು ಹಾಗೂ ತಜ್ಞರ ಜೊತೆ ಸಿಎಂ ವರ್ಚುವಲ್ ಮೂಲಕ ಚರ್ಚೆ ನಡೆಸಲಿದ್ದಾರೆ. ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿತ್ತು. ಆದರೆ ಕೋವಿಡ್ ಕಾರಣಕ್ಕಾಗಿ ಸದ್ಯ ಪಾದಯಾತ್ರೆ ರದ್ದಾಗಿದೆ.
ಇನ್ನೇನು ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾದ ಬೆನ್ನಲೇ ಮತ್ತೆ ಪಾದಯಾತ್ರೆ ಕಮ್ಮಿಕೊಳ್ಳಲು ಕಾಂಗ್ರೆಸ್ ನಿರ್ಧಾರ ಮಾಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೂ ಒತ್ತಡ ಹೆಚ್ಚಾಗಲಿದೆ.
ಇಷ್ಡೇ ಅಲ್ಲದೆ ನೀರಾವರಿ ಯೋಜನೆಗಳ ಜಾರಿಗೆ ಆಗ್ರಹಿಸಿ ಜೆಡಿಎಸ್ ಕೂಡಾ ಜಲಧಾರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧಾರ ಮಾಡಿದೆ. ಚುನಾವಣೆ ದೃಷ್ಟಿಯಿಂದ ಇದು ರಾಜಕೀಯ ಆಯಾಮಗಳನ್ನು ಪಡೆಯದುಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ.
ಈ ನಿಟ್ಟಿನಲ್ಲಿ ಅಂತರರಾಜ್ಯ ಜಲವಿವಾದದ ಕುರಿತಾಗಿ ಸಿಎಂ ಕರೆದ ಸಭೆ ಮಹತ್ವ ಪಡೆದುಕೊಂಡಿದೆ. ಮೇಕೆದಾಟು, ಮಹದಾಯಿ ಯೋಜನೆಗಳ ಜಾರಿಗೆ ಇರುವ ಅಡೆತಡೆಗಳು, ಕಾನೂನಾತ್ಮಕ ತೊಡಕುಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ಆಗುವ ಸಾಧ್ಯತೆ ಇದೆ.