Sunday, December 22, 2024

Latest Posts

Basavaraj Bommai : ಹುಬ್ಬಳ್ಳಿ : ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸಮರ್ಥನೆ

- Advertisement -

Hubballi News : ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿ ವಿಚಾರವಾಗಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಹೇಳಿಕೆ ನೀಡಿದರು.

ರಾಜಕಾರಣ ನಿಂತ ನೀರಲ್ಲ, ಕೆಲವು ಉದ್ದೇಶಕ್ಕಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಕಾಂಗ್ರೆಸ್ ಸರ್ಕಾರದಿಂದ ದುರಾಡಳಿತ ಹೆಚ್ಚಾಗಿದೆ. ಒಂದು ಕಡೆ ಅಭಿವೃದ್ಧಿ ಸಂಪೂರ್ಣ ಸ್ಥಗಿತ, ಮತ್ತೊಂದು ಕಡೆ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದ್ದಾರೆ. ಒಂದು ಹಿಡಿ ಮಣ್ಣನ್ನು ರಸ್ತೆಗೆ ಹಾಕಲಾರದ ಸ್ಥಿತಿ ನಿರ್ಮಾಣವಾಗುತ್ತಿದೆ, ಈ ರೀತಿ ಆದರೆ ಇಡೀ ರಾಜ್ಯ ಅಧೋಗತಿ ಹೋಗುತ್ತೆ.
ಇದನ್ನು ನಿಲ್ಲಿಸುವ ಉದ್ದೇಶದಿಂದ ನಾವಂತೂ ಹೋರಾಟ ಮಾಡುತ್ತಿದ್ದೇವೆ. ಆಡಳಿತ ಪಕ್ಷದ ವಿರುದ್ಧ ಹೋರಾಟ ಮಾಡುವುದು ವಿರೋಧ ಪಕ್ಷದ ಜವಾಬ್ದಾರಿ ಇದೆ. ವಿರೋಧ ಪಕ್ಷಗಳು ಒಟ್ಟಿಗೆ ಹೋರಾಟ ಮಾಡಬೇಕೆಂಬುದು ರಾಜ್ಯದ ಜನರ ಅಪೇಕ್ಷೆ. ಈ ಹಿನ್ನಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹತ್ತಿರ ಬರ್ತಾ ಇವೆ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಕುರಿತು ಮಾತುಕತೆ ನಡೆದಿದೆ. ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ.

ಇಬ್ಬರು ಅಸಹಾಯಕರು ಸೇರಿ ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ ಎಂಬ ಶೆಟ್ಟರ್ ಹೇಳಿಕೆ ವಿಚಾರವಾಗಿಯೂ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ ಹಿಂದೆ ಕಾಂಗ್ರೆಸ್ ನವರು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದರಲ್ಲವೇ ಆಗ ಇಬ್ಬರೂ ಅಸಹಾಯಕರಾಗಿದ್ದರೆ..? ಎಂದು ಪ್ರಶ್ನಿಸಿದರು.

ಕಟೀಲ್ ಆಡಿಯೋ ವಿಚಾರದ ಕುರಿತ ರೇಣುಕಾಚಾರ್ಯ ಹೇಳಿಕೆಗೆ ಪ್ರತಿಕ್ರಿಯಿಸಲ್ಲ ಎಂಬುವು ದಾಗಿ ಮೌನ ಉತ್ತರ ನೀಡಿದರು.

ಜೆಡಿಎಸ್ ಗೆ ಎಷ್ಟು ಸ್ಥಾನ ಕೊಡಬೇಕು ಅನ್ನೋದನ್ನ ವಸ್ತು ಸ್ಥಿತಿ ಆಧಾರದ ಮೇಲೆ ಹೈಕಮಾಂಡ್ ನಿರ್ಧರಿಸುತ್ತೆ. ಬರ ಘೋಷಣೆಗೆ ಕೇಂದ್ರ ಸರ್ಕಾರದ ಮಾನದಂಡಗಳ ಅಡ್ಡಿ ವಿಚಾರ, ಇದೆಲ್ಲವೂ ಕುಂಟು ನೆಪ ಈ ಹಿಂದೆಯೂ ಇದೇ ನಿಯಮಗಳಿದ್ದವು. ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬರ ಘೋಷಣೆ ಮಾಡಲಿಲ್ಲವೇ..? ನಾವು ಸಹ ಕೇಂದ್ರ ಸರ್ಕಾರ ಕೊಡುವುದಕ್ಕಿಂತ ಹೆಚ್ಚಿನ ದುಡ್ಡನ್ನು ಕೊಟ್ಟೆವು. ನಿಯಮ ಬದಲಾವಣೆಗಾಗಿ ನಾವು ಕಾದುಕೊಂಡು ಕೂತೆವೆ..? ಬರ ಪರಿಹಾರದ ಎರಡು ಪಟ್ಟು ಮೊತ್ತ ಕೊಟ್ಟೆವು.
ರಾಜ್ಯ ಸರ್ಕಾರಕ್ಕೆ ಜನರಿಗೆ ಸಹಾಯ ಮಾಡಬೇಕೆಂಬ ಮನಸಿಲ್ಲ. ನ್ಯಾಷನಲ್ ಡಿಸಾಸ್ಟರ್ ನ ಮೊದಲನೇ ಕಂತು ಈಗಾಗಲೇ ಬಂದಿದೆ. ಇವರಿಗೆ ರೈತರ ಸಂಕಷ್ಟ ಪರಿಹಾರ ಮಾಡೋ ಮನಸ್ಸಿಲ್ಲ. ರಾಜ್ಯ ಸರ್ಕಾರ ತನ್ನ ಅಧಿಕಾರ ಬಳಸಿ ಕೂಡಲೇ ಬರ ಘೋಷಣೆ ಮಾಡಬೇಕು ಎಂದು ಹೇಳಿದರು.
ಖಾಸಗಿ ಬಸ್ಸುಗಳ ಮುಷ್ಕರ ವಿಚಾರವಾಗಿ ಉತ್ತರಿಸಿದ ಬೊಮ್ಮಾಯಿ ಖಾಸಗಿ ಬಸ್ ಮಾಲೀಕರ ಸಮಸ್ಯೆ ಬಗೆಹರಿಸ್ತೀವಿ ಅಂತ ಹೇಳ್ತಾನೇ ಬಂದ್ರು. ಸುಮ್ಮನೆ ಮೀಟಿಂಗ್ ಮಾಡಿದರು, ಈಗ ಖಾಸಗಿ ಬಸ್ ಮಾಲೀಕರ ವಿಶ್ವಾಸ ಕಳೆದುಕೊಂಡಿದ್ದಾರೆ. ಈಗಲಾದರೂ ಸರ್ಕಾರ ಎಚ್ಚೆತ್ತು ಖಾಸಗಿ ಬಸ್ ಮಾಲೀಕರ ಬೇಡಿಕೆ ಈಡೇರಿಸಬೇಕು.
ಹಾವೇರಿಯ ಹೊಸರಿತ್ತಿ ಲಾಕಪ್ ಡೆತ್ ವಿಚಾರವಾಗಿ ಮಾತನಾಡಿದ ಬಸವರಾಜ್ ಬೊಮ್ಮಾಯಿ, ಈ ಬಗ್ಗೆ ಮಾಹಿತಿ ತೆಗೆದುಕೊಳ್ಳುತ್ತೇನೆ. ಅಕಸ್ಮಾತ್ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದರೆ ಖಂಡಿತ ಕ್ರಮ ಕೈಗೊಳ್ಳಲು ಆಗ್ರಹಿಸುತ್ತೇನೆ ಎಂದು ಹುಬ್ಬಳ್ಳಿಯಲ್ಲಿ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದರು.

Pradeep Shettar : ಪ್ರದೀಪ್ ಶೆಟ್ಟರ್ ಹಾಗೂ ನಾನು ಆತ್ಮೀಯರು, ಸಹೋದರರು ಇದ್ದ ಹಾಗೆ: ಶಾಸಕ ಮಹೇಶ ತೆಂಗಿನಕಾಯಿ

Pralhad Joshi : ರಾಜ್ಯ ಸರ್ಕಾರ ಖಾಸಗಿ ಬಸ್ ಮಾಲೀಕರ ತೊಂದರೆ ನಿವಾರಿಸಬೇಕು : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Pradeep Shettar : ಪ್ರದೀಪ್ ಶೆಟ್ಟರ್ ಹಾಗೂ ನಾನು ಆತ್ಮೀಯರು, ಸಹೋದರರು ಇದ್ದ ಹಾಗೆ: ಶಾಸಕ ಮಹೇಶ ತೆಂಗಿನಕಾಯಿ

 

- Advertisement -

Latest Posts

Don't Miss