Tuesday, December 24, 2024

Latest Posts

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಸವರಾಜ ಬೊಮ್ಮಾಯಿ

- Advertisement -

ಬೆಂಗಳೂರು : ಇಷ್ಟು ದಿನ ಬಿಜೆಪಿ ಸರ್ಕಾರವಿದ್ದಾಗ, ಮುಖ್ಯಮಂತ್ರಿ ಸ್ಥಾನವನ್ನು ನಿಭಾಯಿಸಿದ್ದ, ಬಸವರಾಜ ಬೊಮ್ಮಾಯಿ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಬೊಮ್ಮಾಯಿ, ಕರ್ನಾಟಕದ ಜನತೆಯ ತೀರ್ಪನ್ನು ಗೌರವಿಸಿ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದೆನು. ನನ್ನ ಮುಖ್ಯಮಂತ್ರಿ ಅವಧಿಯಲ್ಲಿ ಸಹಕರಿಸಿದ ಪ್ರತಿಯೊಬ್ಬರಿಗೂ ನನ್ನ ಹೃದಯಾಂತರಾಳದಿಂದ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ನಿನ್ನೆ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಾಗ, ಈ ಬಗ್ಗೆ ಟ್ವೀಟ್ ಮಾಡಿದ ಬೊಮ್ಮಾಯಿ,  ನಾವು ಕರ್ನಾಟಕದ ಜನತೆಯ ತೀರ್ಪನ್ನು ಗೌರವದಿಂದ ಸ್ವೀಕರಿಸುತ್ತೇವೆ. ನಾವು ನಮ್ಮ ತಪ್ಪುಗಳನ್ನು ವಿಶ್ಲೇಷಿಸಿ, ಸರಿಪಡಿಸಿಕೊಂಡು, ಪಕ್ಷವನ್ನು ಪುನಃ ಸಂಘಟಿಸಿ, ಸಂಸತ್ ಚುನಾವಣೆಯ ವೇಳೆಯಲ್ಲಿ ಮತ್ತೊಮ್ಮೆ ಪುನರಾಗಮಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ.

- Advertisement -

Latest Posts

Don't Miss