ಕರುನಾಡ ರಾಜಕುಮಾರ ಪವರ್ ಸ್ಟಾರ್ ಪುನೀತ್ ರಾಜಕುಮಾರ್ (Puneeth Rajkumar) ಅಭಿಮಾನಿಗಳಿಗೆ ಒಂದು ಸಂತೋಷದ ಸುದ್ದಿ. ಅವರ ಅಕಾಲಿಕ ನಿಧನದಿಂದ ದೇಶ ಹಾಗೂ ಅವರ ಅಭಿಮಾನಿಗಳಿಗೆ (fans) ಆಘಾತ ಉಂಟುಮಾಡಿದ್ದು, ಕರುನಾಡಿನಲ್ಲಿ ಅವರ ಹೆಸರು ಎಂದೆಂದಿಗೂ ಅಜರಾಮರ, ಅವರ ನೆನಪು ಸದಾಕಾಲ ನಮ್ಮೊಂದಿಗೆ ಉಳಿಯಲು 12 ಕಿಲೋ ಮೀಟರ್ ಉದ್ದದ ವರ್ತುಲ ರಸ್ತೆಗೆ ಪುನೀತ್ ರಾಜಕುಮಾರ್ ರಸ್ತೆ ಎಂದು ನಾಮಕರಣ ಮಾಡಲು ಬಿಬಿಎಂಪಿ ಅಧಿಕೃತ ಅನುಮೋದನೆ ನೀಡಿದೆ. ನೀವೇನಾದರೂ ಪುನೀತ್ ರಾಜಕುಮಾರ್ ಅಭಿಮಾನಿ ಆಗಿದ್ದಲ್ಲಿ ಕಮೆಂಟ್ ಬಾಕ್ಸ್ ನಲ್ಲಿ ಕರುನಾಡ ರಾಜಕುಮಾರ ಎಂದು ಕಮೆಂಟ್ ಮಾಡಿ. ರಸ್ತೆಗೆ ಪುನೀತ್ ರಾಜಕುಮಾರ್ ಹೆಸರಿಡುವ ವಿಷಯಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಆಡಳಿತ ಅಧಿಕಾರಿ ರಾಕೇಶ್ ಸಿಂಗ್ (BBMP Administrative Officer Rakesh Singh) ರವರು ನಿರ್ಣಯ ಕೈಗೊಂಡು ಅನುಮೋದನೆ ನೀಡಿದ್ದಾರೆ. ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್ (Nayandahalli Junction) ನಿಂದ ಬನ್ನೇರುಘಟ್ಟ ರಸ್ತೆಯ ವೆಗಾಸಿಟಿ ಮಾಲ್ ಜಂಕ್ಷನ್ ವರೆಗಿನ 12 ಕಿಲೋಮೀಟರ್ ಉದ್ದದ ರಸ್ತೆಗೆ ಪುನೀತ್ ರಾಜಕುಮಾರ್ ರಸ್ತೆಯೆಂದು ಹೆಸರನ್ನು ಇಡಲಾಗುತ್ತಿದೆ. ಪುನೀತ್ ರಾಜಕುಮಾರ್ ಹೆಸರನ್ನು ರಸ್ತೆಗೆ ನಾಮಕರಣ ಮಾಡುವ ಸಂಬಂಧ ಬಿಬಿಎಂಪಿ ಡಿಸೆಂಬರ್ ನಲ್ಲಿ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದು, ಏನಾದರೂ ಆಕ್ಷೇಪಣೆಗಳಿದ್ದಲ್ಲಿ 30 ದಿನಗಳ ಒಳಗೆ ಸಲ್ಲಿಸುವಂತೆ ತಿಳಿಸಲಾಗಿತ್ತು. ಈ ರಸ್ತೆಯ ಸಮೀಪದ ಬಡಾವಣೆಗಳಿಗೆ ಸೇರಿರುವ 8 ಸಂಘಸಂಸ್ಥೆಗಳ ಏಳುನೂರಕ್ಕೂ ಹೆಚ್ಚು ಮಂದಿ ರಸ್ತೆಗೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಜನ ಸಹಿ ಮಾಡಿದ್ದರು. ಬೆಂಗಳೂರು ಮಹಾನಗರ ಜಿಲ್ಲಾ ಡಾಕ್ಟರ್ ಅಂಬರೀಶ್ ಅಭಿಮಾನಿಗಳ ಸಂಘ (Doctor Ambarish Fans Association) ಹಾಗೂ ದೇವರ ಮಗ ಅಭಿಷೇಕ್ ಅಂಬರೀಶ್ ಟ್ರಸ್ಟ್ ಮನವಿ ಪತ್ರ ಸಲ್ಲಿಸಿ ರಸ್ತೆಗೆ ಡಾಕ್ಟರ್ ಅಂಬರೀಶ್ ರಸ್ತೆ ಎಂದು ನಾಮಕರಣ ಮಾಡಬೇಕೆಂದು ಕೋರಿದ್ದರು. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಸಭೆಯಲ್ಲಿ ರಸ್ತೆಗೆ ಪುನೀತ್ ರಾಜಕುಮಾರ್ ರಸ್ತೆ ಎಂದು ನಾಮಕರಣ ಮಾಡಲು ಅನುಮೋದನೆ ನೀಡಿದೆ. ಆದಷ್ಟು ಶೀಘ್ರವಾಗಿ ಮುಖ್ಯಮಂತ್ರಿಗಳಿಂದ ಪುನೀತ್ ರಾಜಕುಮಾರ್ ರಸ್ತೆಯ ನಾಮಕರಣ ಸಮಾರಂಭವನ್ನು ಡಾಕ್ಟರ್ ರಾಜಕುಮಾರ್ (Doctor Rajkumar) ಕುಟುಂಬದ ಎಲ್ಲಾ ಸದಸ್ಯರ ಸಮ್ಮುಖದಲ್ಲಿ ಏರ್ಪಡಿಸಲಾಗುವುದು ಎಂದು ಎನ್ ಆರ್ ರಮೇಶ್ ಮಾಹಿತಿ ತಿಳಿಸಿದ್ದಾರೆ. ಪುನೀತ್ ರಾಜಕುಮಾರ್ ರಸ್ತೆ ಹೊಸಕೆರೆಹಳ್ಳಿ, ದೇವೇಗೌಡ ಪೆಟ್ರೋಲ್ ಬಂಕ್, ಕದಿರೇನಹಳ್ಳಿ ಪಾರ್ಕ್, ಸಾರಕ್ಕಿ ಸಿಗ್ನಲ್, ಜೆಪಿ ನಗರದ ರಸ್ತೆಯನ್ನು ಸಂಪರ್ಕಿಸುತ್ತದೆ. ಇದರಿಂದ ಪುನೀತ್ ಅಭಿಮಾನಿಗಳಿಗೆ ಹಾಗೂ ಕನ್ನಡಿಗರಿಗೆ ಸಂತೋಷವನ್ನು ಉಂಟು ಮಾಡಿದೆ.