ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿಯ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಸಂಭವಿಸಿದ್ದ ಅಗ್ನಿ ಅನಾಹುತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗುಣ ನಿಯಂತ್ರಣ ಮತ್ತು ಗುಣ ಭರವಸೆ ವಿಭಾಗದ ಮುಖ್ಯ ಅಭಿಯಂತರರಾದ ಸಿ.ಎಂ ಶಿವಕುಮಾರ್ ಅವರು ಶೇಷಾದ್ರಿಪುರ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ 6.59ಕ್ಕೆ ವಿಧಿವಶರಾಗಿರುತ್ತಾರೆ.
ಆಡಳಿತಗಾರರು, ಮುಖ್ಯ ಆಯುಕ್ತರಿಂದ ಶಿವಕುಮಾರ್ ನಿಧನಕ್ಕೆ ಸಂತಾಪ ಸೂಚನೆ:ಬಿಬಿಎಂಪಿಯ ಗುಣ ನಿತಂತ್ರಣ ಪ್ರಯೋಗಾಲಯದಲ್ಲಿ ಸಂಭವಿಸಿದ್ದ ಅಗ್ನಿ ಅನಾಹುತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗುಣ ನಿಯಂತ್ರಣ ಮತ್ತು ಗುಣ ಭರವಸೆ ವಿಭಾಗದ ಮುಖ್ಯ ಅಭಿಯಂತರರಾದ ಸಿ.ಎಂ ಶಿವಕುಮಾರ್ ಅವರು ಶೇಷಾದ್ರಿಪುರ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿರುವುದಕ್ಕೆ ಆಡಳಿತಗಾರರಾದ ಶ್ರೀ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಸಂತಾಪ ಸೂಚಿಸಿದರು.
ಪಾಲಿಕೆಯ ಹಲವು ವಿಭಾಗಗಳಲ್ಲಿ ಉತ್ತಮ ಸೇವೆ ಸಲ್ಲಿಸಿರುವ ಶಿವಕುಮಾರ್ ರವರು ಕಿರಿಯ ವಯಸ್ಸಿನಲ್ಲೇ ವಿಧಿವಶರಾಗಿರುವುದು ಮನಸ್ಸಿಗೆ ತುಂಬಾ ನೋವುಂಟು ಮಾಡಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಆ ದೇವರು ಕುಟುಂಬ ಸದಸ್ಯರು ಹಾಗೂ ಬಂಧು-ಮಿತ್ರರಿಗೆ ಕರುಣಿಸಲೆಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.
DKShivakumar: ಕಾಂಗ್ರೆಸ್ ಗ್ಯಾರಂಟಿಗಳ ಒತ್ತಡಕ್ಕೆ ಮಣಿದು ಸಿಲಿಂಡರ್ ಬೆಲೆ ಇಳಿಕೆ ಮಾಡಿದ ಪ್ರಧಾನಿ ಮೋದಿ: ಡಿಸಿಎಂ