www.karnatakatv.net: ರಾಜ್ಯ- ಬೆಂಗಳೂರಿನಲ್ಲಿ ಹಾಡಹಗಲೇ ಬರ್ಬರ ಕೊಲೆ ನಡೆದಿದೆ. ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಛಲವಾದಿಪಾಳ್ಯದ ಫ್ಲವರ್ ಗಾರ್ಡನ್ ನಲ್ಲಿ ಈ ಘಟನೆ ನಡೆದಿದೆ. ಮನೆಯಿಂದ ಹೊರಕರೆತಂದ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ರೇಖಾರವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯ್ತು, ಆದ್ರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. 2018ರ ಫೆಬ್ರವರಿ 8ರಂದು ರೇಖಾ ಪತಿ ಕದಿರೇಶ್ ನನ್ನು ಮಲ್ಲೇಶ್ವರಂನ ದೇವಸ್ಥಾನದ ಬಳಿ ದುಷ್ಕರ್ಮಿಗಳು ಹತ್ಯೆ ಮಾಡಿದ್ರು. ಶೋಬನ್ಇ ಗ್ಯಾಂಗ್ ಕದಿರೇಶ್ ನನ್ನ ಹತ್ಯೆಗೈದಿದ್ರು. ಇದೀಗ ಅದೇ ಗ್ಯಾಂಗ್ ರೇಖಾರವರನ್ನ ಕೊಲೆ ಮಾಡಿರುವುದಾಗಿ ಶಂಕೆ ವ್ಯಕ್ತವಾಗಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.



