Saturday, July 27, 2024

Latest Posts

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಅನುಷ್ಠಾನಕ್ಕೆ ಮುಂದಾದ ಸರ್ಕಾರ

- Advertisement -

ಬೆಳಗಾವಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸುವ ಸಲುವಾಗಿ ಸರ್ಕಾರ ಸುಗ್ರೀವಾಜ್ಞೆಯನ್ನ ಹೊರಡಿಸಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿಧೇಯಕ 2022 ಅನ್ನು ಮಂಗಳವಾರ ಸದನದಲ್ಲಿ ಮಂಡಿಸಿದೆ. ಸದನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರವಾಗಿ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ವಿಧೇಯಕ ಮಂಡಿಸಿದರು.

ಜ್ಯೋತಿಷ್ಯದಲ್ಲಿ ನಿಂಬೆ ಹಣ್ಣಿನ ಪರಿಣಾಮಕಾರಿ ತಂತ್ರಗಳು..!

ಎಸ್‌ಸಿ ವರ್ಗಕ್ಕೆ ಪ್ರಸ್ತುತ ಶೇ.15 ಮೀಸಲಾತಿ ಇದ್ದು, ಅದನ್ನು ಶೇ.17ಕ್ಕೆ ಮತ್ತು ಎಸ್‌ಟಿ ವರ್ಗದ ಮೀಸಲಾತಿ ಶೇ.3 ಇದ್ದು, ಅದನ್ನು ಶೇ.7ಕ್ಕೆ ಹೆಚ್ಚಿಸುವ ಕುರಿತು ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ. ಮೀಸಲಾತಿ ಪ್ರಮಾಣ ಹೆಚ್ಚಳ ಸಂಬಂಧ ಸರ್ಕಾರವು ಸರ್ವಪಕ್ಷಗಳ ಸಭೆ ನಡೆಸಿ ತೀರ್ಮಾನ ಕೈಗೊಂಡಿತ್ತು. ನಂತರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡು ಸುಗ್ರೀವಾಜ್ಞೆ ಹೊರಡಿಸಿತ್ತು.ಇದೀಗ ಸದನದಲ್ಲಿ ವಿಧೇಯಕ ಮಂಡಿಸುವ ಮೂಲಕ ಮೀಸಲಾತಿ ಪ್ರಮಾಣ ಹೆಚ್ಚಳ ಅನುಷ್ಠಾನಕ್ಕೆ ಮುಂದಾಗಿದೆ. ಇನ್ನು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡದ ಮೀಸಲಾತಿ ಪ್ರಮಾಣದ ಹೆಚ್ಚಳ ಹಾಗೂ ಅದರ ಕಾನೂನಾತ್ಮಕ ಸವಾಲುಗಳ ಪರಿಹಾರಗಳ ಕುರಿತು ಸದನದಲ್ಲಿ ವಿಸ್ತೃತವಾಗಿ ಚರ್ಚಿಸಲು ಸರ್ಕಾರ ಸಿದ್ಧವಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಈ ವಿಷಯಗಳು ಗೊತ್ತಾದರೆ ಸಾಸಿವೆ ಸೊಪ್ಪನ್ನು ನೀವು ಬಿಡುವುದಿಲ್ಲ..!

ಸಮಸ್ಯೆ ಏನೇ ಇರಲಿ..ದೇವರು ನಮ್ಮನ್ನು ಕಾಪಾಡಲು ಪ್ರಯತ್ನಿಸುತ್ತಾನೆ.. ಈ ಕಥೆ ಕೇಳಿದರೆ ನಿಮಗೇ ಅರ್ಥವಾಗುತ್ತದೆ…

- Advertisement -

Latest Posts

Don't Miss