ಬೆಳಗಾವಿ:ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೆಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದಲ್ಲಿ ವಾಸವಾಗಿದ್ದ ಜೈನ ಮುನಿಗಳಾದ ಕಾಮಕುಮಾರ ನಂದಿ ಮಹಾರಾಜರ ಜುಲೈ 6 ರಂದು ಆಶ್ರಮದಿಂದ ಕಾಣೆಯಾಗಿದ್ದರು , ಘಟನೆ ಬಳಿಕ ಪೊಲೀಸ್ ಠಾಣೆಗೆ ದೂರನ್ನು ನೀಡಲಾಗಿತ್ತು. ನಂತರ ಕಾರ್ಯ ಶೋಧ ನಡೆಸಿದ ಪೊಲೀಸರು ಕೊಲೆಗಾರರನ್ನು ಕಂಡುಹಿಡಿದಿದ್ದಾರೆ.
ಕೊಲೆಗಾರರನ್ನು ವಿಚಾರಣೆ ನಡೆಸಿದಾಗ ಪೊಲೀಸರಿಗೆ ನಿಜ ಬಾಯಿಬಿಟ್ಟಿದ್ದಾನೆ ಮೂಲತಃ ಖಟಕಬಾವಿ ಗ್ರಾಮದವನೇ ಆಗಿದ್ದ ಪ್ರಮುಖ ಆರೋಪಿ, ಜೈನಮುನಿ ಜೊತೆ ಉತ್ತಮ ಒಡನಾಟ ಹೊಂದಿದ್ದು, ಜೈನಮುನಿಗಳ ವಿಶ್ವಾಸಗಳಿಸಿ ಹಿರೇಕೋಡಿ ಗ್ರಾಮದಲ್ಲಿ ವಾಸವಾಗಿದ್ದನು. ಬಳಿಕ ಇದನ್ನೇ ಲಾಭ ಮಾಡಿಕೊಂಡು ಅವರ ಬಳಿ ಲಕ್ಷಾಂತರ ರೂಪಾಯಿ ಹಣವನ್ನ ಪಡೆದಿದ್ದಾನೆ. ಇದೇ ಹಣವನ್ನ ವಾಪಸ್ ಕೇಳಿದ್ದಕ್ಕೆ ಇದೀಗ ಜೈನಮುನಿಯನ್ನು ಕೊಲೆ ಮಾಡಿದ್ದಾನೆ.
ಚಿಕ್ಕೋಡಿ ಮೂಲಕ ಯುವಕನ ಸಹಾಯವನ್ನು ಪಡೆದುಕೊಂಡು ಕೊಲೆ ಮಾಡಿ ನಂತರ ಮೃತದೇಹವನ್ನು ಸಂಬಂಧಿಕರ ಗದ್ದೆಯ ಕೊಳವೆಬಾವಿಯಲ್ಲಿ ಹಾಕಿ ಹೋಗಿರಯುವುದಾಗಿ ಒಪ್ಪಿಕೊಂಡಿದ್ದಾರೆ .ಪೊಲೀಸರು ಇಬಬ್ರನ್ನು ಬಂದಿಸಿ ಮೃತದೇಹ ಹುಡುಕಾಟದಲ್ಲಿ ನಿರತರಾಗಿದ್ದಾರೆ.
ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ ಹುಬ್ಬಳ್ಳಿ- ಧಾರವಾಡ ಪೊಲೀಸರ ಟ್ವೀಟ್..