Wednesday, October 22, 2025

Latest Posts

ಬೆಳಗಾವಿಯಲ್ಲಿ ಕನ್ನಡ ಬಾವುಟ ಹಾರಿಸಿದ್ದಕ್ಕೆ ಸಹಪಾಠಿಗಳಿಂದ ವಿದ್ಯಾರ್ಥಿ ಮೇಲೆ ಹಲ್ಲೆ

- Advertisement -

ಬೆಳಗಾವಿ: ಗಡಿನಾಡು ಜಿಲ್ಲೆ ಬೆಳಗಾವಿಯ ಕಾಲೇಜೊಂದರಲ್ಲಿ ವಿದ್ಯಾರ್ಥಿ ಕನ್ನಡ ಬಾವುಟ ಹಾರಿಸಿದ್ದಕ್ಕೆ ಸಹಪಾಠಿಗಳು ವಿದ್ಯಾರ್ಥಿಯ ಮೇಲೆ ಹಲ್ಲೆ ಮಾಡಿದ್ದಾರೆ. ಟೀಳಕವಾಡಿಯ ಗೋಗಟೆ ಕಾಲೇಜಿನಲ್ಲಿ ಘಟನೆ ನಡೆದಿದೆ. ಬೀಳ್ಕೊಡುಗೆ ಸಮಾರಂಭದಲ್ಲಿ ವಿದ್ಯಾರ್ಥಿ ಕನ್ನಡ ಬಾವುಟ ಹಿಡಿದು ಡ್ಯಾನ್ಸ್ ಮಾಡಿದ್ದಾನೆ ಇದನ್ನು ನೋಡಿದ ಸಹಪಾಠಿಗಳು ವಿದ್ಯಾರ್ಥಿಯನ್ನು ಥಳಿಸಿದ್ದಾರೆ. ನಂತರ ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಂಜೆ ಗೋಗಟೆ ಕಾಲೇಜಿನಲ್ಲಿ ಇಂಟರ್ ಕಾಲೇಜು ಫೇಸ್ಟ್ ನಡೆಯುವ ವೇಳೆ ವಿದ್ಯಾರ್ಥಿ ಕನ್ನಡ ಬಾವುಟ ಹಿಡಿದು ಡ್ಯಾನ್ಸ್ ಮಾಡುತ್ತಿದ್ದ ವಿದ್ಯಾರ್ಥಿ ಮೇಲೆ ಮೂವರು ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ವಿದ್ಯಾರ್ಥಿಯಿಂದ ಮಾಹಿತಿ ಪಡೆದಿದ್ದೇವೆ. ಹಲ್ಲೆ ಮಾಡಿದ ಮೂವರು ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸುತ್ತೇವೆಂದು ಡಿಸಿಪಿ ರವೀಂದ್ರ ಅವರು ಹೇಳಿದ್ದಾರೆ.

ಡ್ರಗ್ಸ್ ಸೇವನೆ, ಮಾರಾಟ ಶಂಕೆ ಹಿನ್ನೆಲೆ NCB ದಾಳಿ : ಮೂವರು ಯುವತಿಯರು ವಶ

ಪ್ರಮೋದ್ ನಟನೆಯ ‘ಬಾಂಡ್ ರವಿ’ ಡಿಸೆಂಬರ್ 9ಕ್ಕೆ ರಿಲೀಸ್

- Advertisement -

Latest Posts

Don't Miss