Belagavi News:
ಬೆಳಗಾವಿಯಲ್ಲಿ ಚಿರತೆಯೊಂದು 19 ದಿನಗಳಿಂದ ಅಡ್ಡಾಡುತ್ತಿದ್ದು, ಜನ ಆತಂಕಗೊಂಡಿದ್ದಾರೆ. ಚಿರತೆ ದಾಳಿ ಭೀತಿಯಿಂದಾಗಿ ಕಳೆದ 18 ದಿನಗಳಿಂದ 22 ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಚಿರತೆ ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸುತ್ತಿದ್ದರೂ ಅದು ಅಧಿಕಾರಿಗಳ ಕಣ್ತಪ್ಪಿಸಿಕೊಂಡು ಓಡಾಡುತ್ತಿದೆ.
ಸೋಮವಾರ ಬೆಳಗಾವಿ ಹೃದಯ ಭಾಗದಲ್ಲಿರುವ ಗಾಲ್‌್ಫ ಕ್ಲಬ್‌ನಲ್ಲಿ ಚಿರತೆ ಕಂಡುಬಂದಿದೆ ಎಂಬುದು ಗೊತ್ತಾಗುತ್ತಿದ್ದಂತೆ ಅರಣ್ಯ ಹಾಗೂ ಪೊಲೀಸ್ ಇಲಾಖೆಯ 200 ಸಿಬ್ಬಂದಿ ಕಾರ್ಯಾಚರಣೆಗೆ ಇಳಿದು ಶೋಧ ಕಾರ್ಯ ಆರಂಭಿಸಿದ್ದಾರೆ. ಸೋಮವಾರ ಕಣ್ಣೆದುರೇ ಚಿರತೆ ಕಾಣಿಸಿತಾದರೂ ಬಲೆ ಬೀಸುವಷ್ಟರಲ್ಲಿ ಪರಾರಿಯಾಗಿದೆ. ಈ ನಡುವೆ ಶಿವಮೊಗ್ಗದ ಸಕ್ರೆಬೈಲು ಸಾಕಾನೆ ಶಿಬಿರದಿಂದ 2 ಆನೆಗಳನ್ನು ಕರೆತಂದು ಕಾರ್ಯಾಚರಣೆ ನಡೆಸಲು ಉದ್ದೇಶಿಸಲಾಗಿದೆ.ಇನ್ನೂ ಬೋನಿಗೆ ಬೀಳದ ಚಿರತೆಯಿಂದಾಗಿ ಗ್ರಾಮಸ್ಥರು ಆತಂಕದಲ್ಲಿದ್ದಾರೆ.
ಶಿವಮೊಗ್ಗ: ಗಣೇಶೋತ್ಸವ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಡಾ.ಸೆಲ್ವಮಣಿ