www.karnatakatv.net : ಬೆಳಗಾವಿ: ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ವೀರ ಸಿಂಧೂರ ಲಕ್ಷ್ಮಣ ಅವರ ಅಭಿಮಾನಿಗಳು ನಗರದಲ್ಲಿ ಇರುವ ರೈಲ್ವೆ ನಿಲ್ದಾಣಕ್ಕೆ ಶೂರ ವೀರ ಸಿಂಧೂರ ಲಕ್ಷ್ಮಣ ಎಂದು ನಾಮಕರಣ ಮಾಡಬೇಕು ಎಂದು ಕರ್ನಾಟಕ ಪರಿಶಿಷ್ಟ ಪಂಗಡ ವಾಲ್ಮೀಕಿ ನೌಕರರ ಒಕ್ಕೂಟದಿಂದ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿಭಟನೆ ಮುಖಾಂತರ ಮನವಿ ಸಲ್ಲಿಸಿದರು.
ವೀರ ಸಿಂಧೂರ ಲಕ್ಷ್ಮಣ ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷ್ ಸರ್ಕಾರದ ವಿರುದ್ದ ಹೋರಾಡಿದ ಮಹಾನ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ ಸಿಂಧೂರ ಲಕ್ಷ್ಮಣ ಅವರು ಕರ್ನಾಟಕ ಮತ್ತು ಮಹಾರಾಷ್ಟ್ರ ಬಡ ಜನರಿಗಾಗಿ ನ್ಯಾಯ ಒದಗಿಸಿದವರು.ಇವರನ್ನು ಅತಿ ಹತ್ತಿರದಿಂದ ಬಲ್ಲ ಜನರು ವೀರ ಸಿಂಧೂರ ಲಕ್ಷ್ಮಣ ದೈಹಿಕವಾಗಿ ಬಲಿಷ್ಠರಾಗಿದ್ದರು ಆದ್ದರಿಂದ ಇವರ ಹೆಸರನ್ನು ಬೆಳಗಾವಿ ರೈಲ್ವೇ ನಿಲ್ದಾಣಕ್ಕೆ ನಮಕರಣ ಮಾಡಬೇಕು .
ವೀರ ಸಿಂಧೂರ ಲಕ್ಷ್ಮಣರಿಗೆ ಗೌರವ ನೀಡಲು ಮತ್ತು ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ್ ವಿರುದ್ದ ಅವರು ನಡೆಸಿದ ಹೋರಾಟದ ನೆನಪಿಗಾಗಿ ಉತ್ತರ ಕರ್ನಾಟಕದ ಪ್ರದೇಶದ ಜನರ ಪರವಾಗಿ ಬೆಳಗಾವಿ ರೈಲ್ವೆ ನಿಲ್ದಾಣಕ್ಕೆ ವೀರ ಸಿಂಧೂರ ಲಕ್ಷ್ಮಣ ರೈಲ್ವೆ ನಿಲ್ದಾಣ ಎಂದು ಹೆಸರಿಡಲು ಮತ್ತು ಅವರ ಮೂರ್ತಿಯನ್ನು ಪ್ರತಿಷ್ಠಾಪಿಸಲು ಸೂಕ್ತ ಕ್ರಮ ಕೈಗೊಳ್ಳಲು ಕರ್ನಾಟಕ ಪರಿಶಿಷ್ಟ ಪಂಗಡ ವಾಲ್ಮೀಕಿ ನೌಕರರ ಒಕ್ಕೂಟದಿಂದ ಬೆಳಗಾವಿ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ವೀರ ಸಿಂಧೂರ ಲಕ್ಷ್ಮಣ ಅಭಿಮಾನಿಗಳು ಉಪಸ್ಥಿತರಿದ್ದರು.




