Friday, October 18, 2024

Latest Posts

ಫ್ಲೆಕ್ಸ ಪೋಸ್ಟರ್ ಗೆ ಕಡಿವಾಣ ಬಿಬಿಎಂಪಿ ಎಚ್ಚರಿಕೆ

- Advertisement -

BENGALORE NEWS

ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ವಾಣಿಜ್ಯ ಜಾಹೀರಾತುಗಳು ಮತ್ತು ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಮತ್ತಿತರೇ ಮುದ್ರಿತ ಜಾಹೀರಾತುಗಳನ್ನು ನಿಷೇಧಿಸುವ ಬಗ್ಗೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ “ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೊರಾಂಗಣ ಜಾಹೀರಾತು ಫಲಕ ಮತ್ತು ಸಾರ್ವಜನಿಕ ಸಂದೇಶದ ಉಪವಿಧಿಗಳು-2018” ರಲ್ಲಿ ಅಂಗಡಿ ಮುಂಗಟ್ಟು ಜಾಹೀರಾತುಗಳು, ವಾಹನ ಸ್ವ-ಜಾಹೀರಾತು ಇನ್ನಿತರೆ ಸಣ್ಣಪುಟ್ಟ ಜಾಹೀರಾತುಗಳನ್ನು ಸೀಮಿತ ಅವಧಿಗೆ ಮತ್ತು ಸೀಮಿತ ಅಳತೆಗೆ (ಪಿಪಿಪಿ ಯೋಜನೆಗಳು ಸೇರಿದಂತೆ) ಅನುಮತಿಸಲು ಮಾತ್ರ ಅವಕಾಶವಿದ್ದು, ಇವುಗಳನ್ನು ಹೊರತುಪಡಿಸಿ ಇತರೆ ಯಾವುದೇ ಖಾಸಗಿ ಸ್ವತ್ತುಗಳಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸಿ ವಾಣಿಜ್ಯ ಜಾಹೀರಾತುಗಳನ್ನು ಪ್ರದರ್ಶಿಸುವುದು, ಎಲ್.ಇ.ಡಿ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಹಾಗೂ ಸಾರ್ವಜನಿಕ ಮತ್ತು ವೈಯಕ್ತಿಕ ಜಾಹೀರಾತುಗಳು, ಶುಭಾಶಯಗಳು, ಸಭೆ ಸಮಾರಂಭಗಳು ಕುರಿತ ಜಾಹೀರಾತು/ಪ್ರಕಟಣೆಗಳ ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಭಿತ್ತಿಪತ್ರ, ಬಾವುಟಗಳು ಇತ್ಯಾದಿ ಅಳವಡಿಸುವುದನ್ನು ನಿಷೇಧಿಸಲಾಗಿದ್ದರೂ ಸಹ ಮತ್ತೆ ಮತ್ತೆ ಅಳವಡಿಸುತ್ತಿರುವುದರಿಂದ ಸಾರ್ವಜನಿಕ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿರುವುದು ಅಲ್ಲದೇ ನಗರದ ಸೌಂದರ್ಯ ಹಾಳಾಗುತ್ತಿದೆ ಮತ್ತು ಪರಿಸರಕ್ಕೆ ಮಾರಕವಾಗಿರುತ್ತದೆ.

ಘನ ಸರ್ಕಾರವು ಪರಿಸರ(ಸಂರಕ್ಷಣೆ) ಕಾಯಿದೆ 1986ರ ಸೆಕ್ಷನ್ 5ರ ಅಡಿಯಲ್ಲಿ ಅಧಿಕಾರ ಚಲಾಯಿಸಿ ಸರ್ಕಾರದ ಅಧಿಸೂಚನೆ ಸಂಖ್ಯೆ:ಅಪಜೀ 17 ದಿನಾಂಕ:11.03.2016 ರಂತೆ ಪ್ಲಾಸ್ಟಿಕ್ ಬಳಸುವುದನ್ನು ನಿಷೇಧಿಸಿದೆ. 2012 ಬೆಂಗಳೂರು

ಈ ವಿಷಯಗಳ ಕುರಿತು ಈಗಾಗಲೇ ಸರ್ಕಾರದಿಂದ ಮತ್ತು ಪಾಲಿಕೆಯಿಂದ ಮಾಧ್ಯಮಗಳಲ್ಲಿ ಪ್ರಕಟಣೆಗಳನ್ನು ನೀಡಿ ಸಾರ್ವಜನಿಕರಿಗೆ ತಿಳಿಯಪಡಿಸಲಾಗಿದೆ.

ಈ ರೀತಿಯ ಕಾನೂನುಗಳು ಜಾರಿಯಲಿದ್ದರೂ ಸಹ ಅನ್ಯ ಮಾರ್ಗದಲ್ಲಿ ಸೈಕಲ್ ವಾಣಿಜ್ಯ ಜಾಹೀರಾತುಗಳು, ವಾಹನಗಳ ಮೇಲೆ ವಾಣಿಜ್ಯ ಜಾಹೀರಾತುಗಳು, ಎಲ್.ಇ.ಡಿ ಜಾಹೀರಾತುಗಳನ್ನು ಮತ್ತು ಅಂಗಡಿ ಮುಂಗಟ್ಟುಗಳಲ್ಲಿ ಬೃಹತ್ ಗಾತ್ರದ ಜಾಹೀರಾತು ಹಾಗೂ ಪ್ರಕಟಣೆಗಳನ್ನು ಅಳವಡಿಸುವುದು ಬಿಬಿಎಂಪಿ ಕಾಯ್ದೆ 2020 ಮತ್ತು ಕರ್ನಾಟಕ ಮುಕ್ತ ಸ್ಥಳಗಳ(ವಿರೂಪಗೊಳಿಸುವಿಕೆ ತಡೆ) ಕಾಯ್ದೆ 1981ರ ಕಲಂ(3)ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿರುತ್ತದೆ.

ಈ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಣಿಜ್ಯ ಉತ್ಪನ್ನ ಮತ್ತು ಸೇವೆಗಳನ್ನು ಒದಗಿಸುವ ಕಂಪನಿ/ಉತ್ಪಾದಕರು ತಮ್ಮ ಉತ್ಪನ್ನಗಳ ಬಗ್ಗೆ ವಾಣಿಜ್ಯ ಜಾಹೀರಾತುಗಳ ಮೂಲಕ ಸಾರ್ವಜನಿಕ ಪ್ರದರ್ಶನ ಮಾಡುವಲ್ಲಿ ಖಾಸಗಿ ಏಜೆನ್ಸಿಗಳು ಅಧಿಕೃತವಾಗಿ ಬಿಬಿಎಂಪಿಯಿಂದ ಪರವಾನಿಗೆ ಪಡೆದಿರುವ ಏಜೆನ್ಸಿಗಳ ಮೂಲಕ ವಾಣಿಜ್ಯ ಜಾಹೀರಾತು ಪ್ರದರ್ಶನ ಮಾಡುವುದು. ಅದರ ಹೊರತಾಗಿ ಜಾಹೀರಾತು ಪ್ರಕಟಸುವಂತಹ ಕಂಪನಿ/ಉತ್ಪಾದಕರು/ಪ್ರಕಟಣಾಗಾರರು/ಮುದ್ರಣಗಾರರು ಮತ್ತು ಸಂಬಂಧಪಟ್ಟ ಅನಧಿಕೃತ ಏಜೆನ್ಸಿಗಳ ಹಾಗೂ ಪ್ಲೆಕ್ಸ್ ಬ್ಯಾನರ್‌ಗಳಲ್ಲಿ ಭಾವಚಿತ್ರವಿರುವ ವ್ಯಕ್ತಿಗಳ ವಿರುದ್ಧ ಕರ್ನಾಟಕ ಮುಕ್ತ ಸ್ಥಳಗಳ ವಿರೂಪಗೊಳಿಸುವಿಕೆ ತಡೆ) ಕಾಯ್ದೆ 1981ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿ, 6 ತಿಂಗಳವರೆಗಿನ ಕಾರಾವಾಸ ಅಥವಾ ರೂ.1,000/- ಗಳವರೆಗಿನ ದಂಡ ವಿಧಿಸಲು ಅಥವಾ ಕಾರಾವಾಸದೊಂದಿಗೆ ದಂಡ ವಿಧಿಸುವ ಶಿಕ್ಷೆಗೆ ಗುರಿಪಡಿಸಲಾಗುವುದು. ಘನ ಕರ್ನಾಟಕ ಸರ್ಕಾರವು ಪರಿಸರ (ಸಂರಕ್ಷಣೆ) ಕಾಯಿದೆ 1986ರ ಸೆಕ್ಷನ್ 5ರ ಅಡಿಯಲ್ಲಿ ಅಧಿಕಾರ ಚಲಾಯಿಸಿ ಹೊರಡಿಸಿದ ಸರ್ಕಾರದ ಅಧಿಸೂಚನೆ ಸಂಖ್ಯೆ:ಅಪಜೀ.17 ಇಪಿಸಿ 2012, ಬೆಂಗಳೂರು. ದಿನಾಂಕ:11.03.2016 ರಂತೆ ಹಾಗೂ ಇತರ ಸೂಕ್ತ ಕಾನೂನುಗಳ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದೆಂದು ಕಂದಾಯ/ಜಾಹೀರಾತು ವಿಭಾಗದ ವಿಶೇಷ ಆಯುಕ್ತರಾದ ಡಾ. ಆರ್.ಎಲ್ ದೀಪಕ್ ರವರು ಸಾರ್ವಜನಿಕ ಪ್ರಕಟಣೆಯ ಮೂಲಕ ತಿಳಿಸಿರುತ್ತಾರೆ‌.

ರಾಯಚೂರು ಜಿಲ್ಲಾ ಚುನಾವಣಾ ರಾಯಭಾರಿಯಾಗಿ ರಾಜಮೌಳಿ ಆಯ್ಕೆ

ಸಾವಿರ ಕೋಟಿ ಆಸ್ತಿ ಬಗ್ಗೆ ಬಾಂಬ್ ಸಿಡಿಸಿದ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ

ಧಾರವಾಡದಲ್ಲಿ ಮೋದಿ ಹವಾ, ಐಐಟಿ ಕಾಲೇಜು ಉದ್ಗಾಟಿಸಿದ ಪ್ರಧಾನಿ ಮೋದಿ

- Advertisement -

Latest Posts

Don't Miss