ಬೆಂಗಳೂರು: ಡಿ.29ರಂದು ಬೆಂಗಳೂರಿನಲ್ಲಿ ಆಟೋ ಸಂಚಾರ ಬಂದ್ ಆಗಲಿದೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ, ಬೆಂಗಳೂರಿನ ಆಟೋ ಚಾಲಕರು ಧರಣಿ ನಡೆಸಲಿದ್ದಾರೆ. ರ್ಯಾಪಿಡೋ ಬೈಕ್, ಟ್ಯಾಕ್ಸಿ ಆ್ಯಪ್ ಬ್ಯಾನ್ ಮಾಡಿ ಬೌನ್ಸ್ ಎಲೆಕ್ಟ್ರಿಕ್ ಬೈಕ್ ಗೆ ನೀಡಿರುವ ಅನುಮತಿ ಹಿಂಪಡೆಯಲು ಒತ್ತಾಯಿಸಿದ್ದಾರೆ. ರಾಜ್ಯ ಸಾರಿಗೆ ಇಲಾಖೆಯ ವಿರುದ್ಧ ಸಿಡಿದೆದ್ದ ಆಟೋ ಚಾಲಕರು ಡಿ.20ರಂದು ಬಂದ್ ಗೆ ಕರೆ ನೀಡಿದ್ದಾರೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಸಮಸ್ಯೆಯಾಗಬಹುದು. ಕ್ರಾಂತಿ ವೀರ ಸಂಗೂಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್ ನಿಂದ ಬೃಹತ್ ಆಟೋ ರ್ಯಾಲಿ ಮೂಲಕ ವಿಧಾನಸೌಧಕ್ಕೆ ತೆರಳಿ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಈ ಮುಷ್ಕರಕ್ಕೆ 21 ಆಟೋ ಸಂಘಟನೆಗಳು ಬೆಂಬಲ ನೀಡಿದ್ದು, ನಗರದ 2 ಲಕ್ಷದ 10 ಸಾವಿರ ಆಟೋ ಚಾಲಕರು ಧರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ : ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣಗೌಡ
ಪಾಟ್ನಾ ರೈಲ್ವೆ ಸ್ಟೇಷನ್ ನಲ್ಲಿ ಬಾಂಬ್ ಇರಿಸಿರುವ ಬೆದರಿಕೆ : ವದಂತಿ ಹರಡಿದವರ ಬಂಧನ