ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಆಟೋ ಸಿಗುವುದು ಕಷ್ಟವಾಗಬಹುದು. ಯಾಕೆಂದರೆ ಬೆಂಗಳೂರು ಆಟೋರಿಕ್ಷಾ ಚಾಲಕರ ಸಂಘಟನೆಗಳ ಒಕ್ಕೂಟ ರಾಜ್ಯ ಸಾರಿಗೆ ಇಲಾಖೆಯ ವಿರುದ್ಧ ಪ್ರತಿಭಟನೆ ಮಾಡಲಿವೆ. ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಆ್ಯಪ್ ಬ್ಯಾನ್, ಬೌನ್ಸ್ ಎಲೆಕ್ಟ್ರಿಕ್ ಬೈಕ್ಗೆ ನೀಡಿರುವ ಅನುಮತಿ ವಾಪಸ್ ಪಡೆಯುವಂತೆ ಒತ್ತಾಯಿಸಿ ಆಟೋ ಚಾಲಕರು ಇಂದು ವಿಧಾನಸೌಧ ಮುತ್ತಿಗೆ ಹಾಕಲು ತಯಾರಿ ನಡೆಸಿದ್ದಾರೆ. ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್ನಿಂದ ಬೆಳಿಗ್ಗೆ 11ಕ್ಕೆ ಬೃಹತ್ ಆಟೋ ರ‍್ಯಾಲಿ ಮಾಡಿ ಎರಡು ಸಾವಿರ ಆಟೋಗಳ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಆಟೋ ಚಾಲಕರು ತಯಾರಿ ನಡೆಸಿದ್ದಾರೆ. ಈ ಪ್ರತಿಭಟನೆಗೆ 21 ಆಟೋ ಸಂಘಟನೆಗಳು ಈಗಾಗಲೇ ಒಪ್ಪಿಗೆ ನೀಡಿದ್ದು, ರಾಜಧಾನಿಯ ಎರಡು ಲಕ್ಷದ ಹತ್ತು ಸಾವಿರ ಆಟೋ ಚಾಲಕರು ಈಗಾಗಲೇ ಬೆಂಬಲ ನೀಡಿದ್ದಾರೆ.
ಕೋವಿಡ್ 4ನೇ ಅಲೆ, ಜನವರಿ ಮೂರನೇ ವಾರದವರೆಗೆ ಎಚ್ಚರಿಕೆ ಅಗತ್ಯ: ಮಾಜಿ ಏಮ್ಸ್ ನಿರ್ದೇಶಕ
ರಾಜಧಾನಿಯಲ್ಲಿ ರ‍್ಯಾಪಿಡೋ ಬೈಕ್ ಟ್ಯಾಕ್ಸಿಗಳ ಸಂಖ್ಯೆ ಹೆಚ್ಚಾಗುತ್ತಿವೆ. ರ‍್ಯಾಪಿಡೋ ಬೈಕ್ ಟ್ಯಾಕ್ಸಿಗೆ ಅನುಮತಿ ಇಲ್ಲದಿದ್ದರು, ರಾಜಾರೋಷವಾಗಿ ಸಂಚಾರ ಮಾಡುತ್ತಿವೆ. ಆರ್ ಟಿಓ ಅಧಿಕಾರಿಗಳು ಬೈಕ್ ಟ್ಯಾಕ್ಸಿಗಳನ್ನು ಮಟ್ಟ ಹಾಕುವಲ್ಲಿ ವಿಫಲರಾಗಿದ್ದಾರೆ. ಕರ್ನಾಟಕ ರಾಜ್ಯ ಸಾರಿಗೆ ಪ್ರಾಧಿಕಾರ ಎಲೆಕ್ಟ್ರಿಕ್ ಬೈಕ್ಗಳಿಗೆ ಅನುಮತಿ ನೀಡಿದ್ದು, ರೆ. ಕರ್ನಾಟಕ ರಾಜ್ಯ ಸಾರಿಗೆ ಪ್ರಾಧಿಕಾರ ಎಲೆಕ್ಟ್ರಿಕ್ ಬೈಕ್ಗಳಿಗೆ ಅನುಮತಿ ನೀಡಿದೆ. ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಆ್ಯಪ್ ಬ್ಯಾನ್ ಮಾಡಬೇಕು, ಬೌನ್ಸ್ ಎಲೆಕ್ಟ್ರಿಕ್ ಬೈಕ್ ಗೆ ನೀಡಿರುವ ಅನುಮತಿ ವಾಪಸ್ ಪಡೆಯಬೇಕು ಎಂದು ಆಟೋ ಚಾಲಕರು ಬೇಡಿಕೆಯಿಟ್ಟಿದ್ದಾರೆ. ಇಂದು ರಾಜ್ಯ ಸಾರಿಗೆ ಇಲಾಖೆಯ ವಿರುದ್ಧ ಆಟೋ ಚಾಲಕರು ಪ್ರತಿಭಟನೆಗೆ ಮುಂದಾಗಲಿದ್ದಾರೆ. ಇದರಿಂದ ಬೆಂಗಳೂರಿನಲ್ಲಿ ಇಂದು ಸರಿಯಾದ ಸಮಯಕ್ಕೆ ಆಟೋಗಳು ಸಿಗುವುದಿಲ್ಲ.